ಬೆಂಗಳೂರು: ‘ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿಗೌಡ ಮತ್ತು ಗೋಪಿನಾಥ್ ನೇತೃತ್ವದಲ್ಲಿ ಮೂರು ಸಮಿತಿಗಳನ್ನು ರಚಿಸಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
‘ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ಸಮಿತಿ ವರದಿ ನೀಡಲಿದೆ. ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಕಷ್ಟವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.