ADVERTISEMENT

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 19:53 IST
Last Updated 6 ಜನವರಿ 2022, 19:53 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಬೆಂಗಳೂರು: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ಬಾರಿಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಪಡಿಸಲಾಗಿದೆ.

ಎರಡನೇ ಅಲೆಯ ಬಳಿಕ ಕೋವಿಡ್‌ ಪ್ರಕರಣಗಳು ಕಡಿಮೆಯಾಗಿದ್ದರಿಂದ ಫಲಪುಷ್ಪ ಪ್ರದರ್ಶನ ಆಯೋಜಿಸಲು ತೋಟಗಾರಿಕೆ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು.

ಈ ಬಾರಿ ನಟರಾದ ರಾಜ್‌ಕುಮಾರ್ ಹಾಗೂ ಪುನೀತ್‌ ರಾಜ್‌ಕುಮಾರ್ ಗೌರವಾರ್ಥ ಫಲಪುಷ್ಪ ಪ್ರದರ್ಶನ ಆಯೋಜಿಸಲು ಉದ್ದೇಶಿಸಲಾಗಿತ್ತು.ಗಾಜಿನ ಮನೆಯಲ್ಲಿ ಇಬ್ಬರು ನಟರ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಿ, ಅವರಿಗೆ ಪುಷ್ಪನಮನ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿತ್ತು.

ADVERTISEMENT

ಆದರೆ, ಸೋಂಕು ಪ್ರಕರಣಗಳು ದಿಢೀರ್ ಏರಿಕೆಯಾಗಿದ್ದರಿಂದ ಮತ್ತು ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿರುವುದರಿಂದ ತೋಟಗಾರಿಕೆ ಇಲಾಖೆ ಪ್ರದರ್ಶನವನ್ನು ರದ್ದುಪಡಿಸಿದೆ. ಕೋವಿಡ್‌ ಕಾರಣಕ್ಕೆ ಪ್ರದರ್ಶನವನ್ನು ರದ್ದುಪಡಿಸುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ.

‘ಫಲಪುಷ್ಪ ಪ್ರದರ್ಶನಕ್ಕೆ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಆದರೆ, ಸಾಂಕ್ರಾಮಿಕ ಕಾಯಿಲೆಯ ಕಾರಣಕ್ಕೆ ಈ ಬಾರಿಯೂ ಪ್ರದರ್ಶನವನ್ನು ರದ್ದುಪಡಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ.ಜಗದೀಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.