ADVERTISEMENT

PHOTOS | ಫಲಪುಷ್ಪ ಪ್ರದರ್ಶನ: ಹೂಗಳ ಲೋಕದಲ್ಲಿ ಧ್ಯಾನಿಸಿದ ಜನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಆಗಸ್ಟ್ 2025, 5:10 IST
Last Updated 8 ಆಗಸ್ಟ್ 2025, 5:10 IST
<div class="paragraphs"><p>ಸ್ವಾತಂತ್ರ್ಯ ದಿನದ ಅಂಗವಾಗಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಲಾಲ್‌ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ 11 ದಿನಗಳ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ 218ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಿರುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು.</p></div>

ಸ್ವಾತಂತ್ರ್ಯ ದಿನದ ಅಂಗವಾಗಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಲಾಲ್‌ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ 11 ದಿನಗಳ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ 218ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಿರುವ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು.

   

ಪ್ರಜಾವಾಣಿ ಚಿತ್ರ: ರಂಜು ಪಿ.

ಈ ಪ್ರದರ್ಶನ ಆಗಸ್ಟ್ 16ರವರೆಗೆ ನಡೆಯಲಿದೆ

ADVERTISEMENT

218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು

ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳು ರಾರಾಜಿಸುತ್ತಿವೆ. 

ಕಿತ್ತೂರು ಕೋಟೆ ಮಾದರಿಯನ್ನು 1.5 ಲಕ್ಷ ಡಚ್‌ ಗುಲಾಬಿ ಹೂವು, 1.5 ಲಕ್ಷ ಹೈಬ್ರಿಡ್‌ ಸೇವಂತಿಗೆ ಹಾಗೂ 30 ಸಾವಿರ ಕೋಲ್ಕತ್ತ ಸೇವಂತಿಗೆ ಹೂವುಗಳನ್ನು ಬಳಸಿಕೊಂಡು ಈ ಪರಿಕಲ್ಪನೆ ಸಿದ್ಧಪಡಿಸಲಾಗಿದೆ.

ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಕಾರ್ಯಕ್ಷೇತ್ರವಾಗಿದ್ದ ಕಿತ್ತೂರು ಕೋಟೆ ಮಾದರಿಯು ಪುಷ್ಪಗಳಲ್ಲಿ ಅನಾವರಣಗೊಂಡಿದೆ.

ವಿದೇಶಿ ಪ್ರವಾಸಿಗರೂ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡು ಫೋಟೊ ಕ್ಲಿಕ್ಕಿಸಿಕೊಂಡರು

‘ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯ ಆಧಾರಿತ ಫಲಪುಷ್ಪ‌‌ ಪ್ರದರ್ಶನ ನಡೆಯುತ್ತಿದೆ

ಗಾಜಿನ ಮನೆಯ ಪ್ರವೇಶ ದ್ವಾರದ ಭಾಗದಲ್ಲಿ 1.75 ಲಕ್ಷಕ್ಕೂ ಹೆಚ್ಚಿನ ಹೂವು ಮತ್ತು ಎಲೆ ಜಾತಿಯ ಗಿಡಗಳನ್ನು ಪ್ರದರ್ಶಿಸಲಾಗಿದೆ.

ಗಾಜಿನ ಮನೆಯ ಹಿಂಭಾಗದಲ್ಲಿ ರಾಣಿ ಅಬ್ಬಕ್ಕ ದೇವಿ, ಚೆನ್ನಾ ಭೈರಾದೇವಿ, ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮ, ವೀರಮ್ಮಾಜಿ, ಒನಕೆ ಓಬವ್ವನವರ ಪ್ರತಿಮೆಗಳು ರಾರಾಜಿಸುತ್ತಿವೆ

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು

ಮೊದಲ ದಿನ ವಯಸ್ಕರು, ಮಕ್ಕಳೂ ಸೇರಿ 14,317 ಮಂದಿ ಫಲಪುಷ್ಪ ಪ್ರದರ್ಶನ  ವೀಕ್ಷಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.