ADVERTISEMENT

ಫಲಪುಷ್ಪ ಪ್ರದರ್ಶನ: ವಾಹನ ನಿಲುಗಡೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 25 ಜನವರಿ 2024, 22:19 IST
Last Updated 25 ಜನವರಿ 2024, 22:19 IST
   

ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಜ.28ರವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಉದ್ಯಾನದ ಸುತ್ತಮುತ್ತ ಸಂಚಾರ ದಟ್ಟಣೆ ನಿಯಂತ್ರಿಸಲು ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

‘ಗಣ್ಯರು, ಪ್ರವಾಸಿಗರು, ವಿದೇಶಿಗರು, ಶಾಲಾ ಮಕ್ಕಳು ಸೇರಿದಂತೆ ಸುಮಾರು 10 ಲಕ್ಷ ಜನ ಪ್ರದರ್ಶನ ವೀಕ್ಷಿಸಲು ಬರುವ ನಿರೀಕ್ಷೆ ಇದೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಕೆಲವು ಕಡೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಿಲುಗಡೆ ನಿರ್ಬಂಧಿತ ರಸ್ತೆಗಳು

ADVERTISEMENT

* ಲಾಲ್‌ಬಾಗ್‌ ಮುಖ್ಯ ದ್ವಾರದಿಂದ ನಿಮ್ಹಾನ್ಸ್‌ವರೆಗಿನ ಡಾ. ಮರಿಗೌಡ ರಸ್ತೆ

* ಕೆ.ಎಚ್‌. ವೃತ್ತದಿಂದ ಶಾಂತಿನಗರ ಜಂಕ್ಷನ್

* ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ

* ಊರ್ವಶಿ ಚಿತ್ರಮಂದಿರದಿಂದ ವಿಲ್ಸನ್ ಗಾರ್ಡನ್ 12ನೇ ಅಡ್ಡರಸ್ತೆವರೆಗೆ

* ಬಿಎಂಟಿಸಿ ಜಂಕ್ಷನ್‌ನಿಂದ ಅಂಚೆ ಕಚೇರಿವರೆಗೆ

* ಲಾಲ್‌ಬಾಗ್ ಪಶ್ಚಿಮ ದ್ವಾರದಿಂದ ಆರ್‌.ವಿ. ಟೀಚರ್ಸ್ ಕಾಲೇಜ್‌ವರೆಗೆ

* ಆರ್‌.ವಿ. ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್‌ವರೆಗೆ

* ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ

ನಿಲುಗಡೆಗೆ ಅವಕಾಶ ಕಲ್ಪಿಸಿರುವ ರಸ್ತೆಗಳು

* ಡಾ. ಮರಿಗೌಡ ರಸ್ತೆಯ ಅಲ್‌ ಅಮೀನ್ ಕಾಲೇಜು ಹಾಗೂ ಹಾಪ್‌ಕಾಮ್ಸ್ ಆವರಣ

* ಶಾಂತಿನಗರ ಬಸ್‌ ನಿಲ್ದಾಣದ ಬಹುಮಹಡಿ ಕಟ್ಟಡ

* ಜೆ.ಸಿ. ರಸ್ತೆಯ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.