ADVERTISEMENT

ಭೂ ಸ್ವಾಧೀನ ಕೈಬಿಡಲು ಕಾನೂನು ಸಲಹೆಗಳಿವೆ: ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 16:32 IST
Last Updated 4 ಜುಲೈ 2025, 16:32 IST
<div class="paragraphs"><p>ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ ಕರ್ನಾಟಕ, ಭೂ ಸ್ವಾಧೀನ ವಿರೋಧಿ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಆಯೋಜಿಸಿದ್ದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಮತ್ತು‌ ಕಾರ್ಯಕರ್ತರು.</p></div>

ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ ಕರ್ನಾಟಕ, ಭೂ ಸ್ವಾಧೀನ ವಿರೋಧಿ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಆಯೋಜಿಸಿದ್ದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಮತ್ತು‌ ಕಾರ್ಯಕರ್ತರು.

   

ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.

ಬೆಂಗಳೂರು: ‘ಭೂ ಸ್ವಾಧೀನ ಕೈಬಿಡಲು ಕಾನೂನು ತೊಡಕುಗಳಿದ್ದರೆ, ನನ್ನ ಬಳಿ ಬನ್ನಿ. ಎಲ್ಲ ಕಾನೂನು ತೊಡಕುಗಳನ್ನು ನಿವಾರಿಸಿ ಡಿನೋಟಿಫಿಕೇಷನ್ ಮಾಡುವ ರೀತಿಯಲ್ಲಿ ಕಾನೂನು ಸಲಹೆಗಳನ್ನು ನೀಡುತ್ತೇನೆ’ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ತಿಳಿಸಿದರು.

ADVERTISEMENT

ನಗರದ ಸ್ವಾಂತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ಭೂಮಿ ಸತ್ಯಾಗ್ರಹದ ವೇದಿಕೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಸಭೆಯಲ್ಲಿ ಮುಖ್ಯಮಂತ್ರಿ ಭೂ ಸ್ವಾಧೀನ ಕೈಬಿಡಲು ಕಾನೂನಿನಲ್ಲಿ ತೊಡಕುಗಳಿವೆ ಎಂದು ಹೇಳಿ 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಆದರೆ, ಡಿನೋಟಿಫೈ ಹೇಗೆ ಮಾಡಬೇಕೆಂದು ನಾನು ಕಾನೂನು ಸಲಹೆಗಳನ್ನು ನೀಡುತ್ತೇನೆ’ ಎಂದು ತಿಳಿಸಿದರು.

‘ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ಎಂದು ಘೋಷಿಸುವಂತಿಲ್ಲ, ಅದು ಕಾನೂನು ಬಾಹಿರ. ಭೂಸ್ವಾಧೀನ ಮಾಡಬೇಕೆಂದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆಗಳು ನಡೆಯಬೇಕು. ಆದರೆ ಇಲ್ಲಿ ನಡೆದಿಲ್ಲ. ಇದು ಸಂವಿಧಾನ ವಿರೋಧಿ ನಡೆ’ ಎಂದರು.

‘ಪ್ರಾಥಮಿಕ ಅಧಿಸೂಚನೆಯಿಂದ ಅಂತಿಮ ಅಧಿಸೂಚನೆ ಹೊರಡಿಸುವವರೆಗೂ ಸರ್ಕಾರ ಮಾಡಿದ್ದೆಲ್ಲವೂ ಕಾನೂನು ಬಾಹಿರವಾಗಿದೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು’ ಎಂದು ಅವರು ಒತ್ತಾಯಿಸಿದರು.

ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ದೇಶವ್ಯಾಪಿ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ.
ದರ್ಶನ್ ಪಾಲ್ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ನಾಯಕ
ಸರ್ಕಾರ ಭೂಮಿ ಕಿತ್ತುಕೊಳ್ಳಲು ಹಳ್ಳಿಗೆ ಬಂದಾಗ ನಾವೆಲ್ಲ ತೀವ್ರವಾಗಿ ವಿರೋಧಿಸಬೇಕು. ಗ್ರಾಮ ಸಮಿತಿ ಒಪ್ಪಿಗೆ ಇಲ್ಲದೇ ಕೊಡುವುದಿಲ್ಲ ಎಂದು ಗಟ್ಟಿಯಾಗಿ ಹೇಳಬೇಕು.
ರಾಕೇಶ್ ಟಿಕಾಯತ್ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.