ADVERTISEMENT

ಆರ್ಯ ವೈಶ್ಯ ಮಹಾಸಭಾದಿಂದ ಲ್ಯಾಪ್‍ಟಾಪ್ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 17:22 IST
Last Updated 19 ಜನವರಿ 2022, 17:22 IST
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದರು. ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ್ ಹಾಗೂ ಇತರರು ಇದ್ದಾರೆ. 
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದರು. ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ್ ಹಾಗೂ ಇತರರು ಇದ್ದಾರೆ.    

ಬೆಂಗಳೂರು: ‘ಮಕ್ಕಳಲ್ಲಿ ನಾವು ಸ್ವಶಕ್ತಿಯ ಮೇಲೆ ಮುಂದುವರೆಯುತ್ತೇವೆ ಎನ್ನುವ ಆತ್ಮವಿಶ್ವಾಸ ಇರಬೇಕು. ವೃದ್ಧಾಶ್ರಮ ಎಂಬ ಭಾವನೆಯನ್ನು ದೂರ ಮಾಡಿ, ಒಳ್ಳೆಯ ನಾಗರಿಕ ಗುಣಗಳನ್ನು ಬೆಳೆಸಿಕೊಳ್ಳಬೇಕು’ ಎಂದುಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಕಿವಿಮಾತು ಹೇಳಿದರು.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ನಗರದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷಆರ್.ಪಿ.ರವಿಶಂಕರ್,‘ಈ ವರ್ಷ ₹1.20 ಕೋಟಿ ವೆಚ್ಚದಲ್ಲಿ 198 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಮಾಡಲಾಗುತ್ತಿದೆ. ಈ ಮೊತ್ತವನ್ನು ಸಮಾಜದಿಂದ ಮತ್ತು ದಾನಿಗಳಿಂದ ಸಂಗ್ರಹಿಸಲಾಗಿದೆ. ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡುವುದು ನಮ್ಮ ಉದ್ದೇಶ. ಮಕ್ಕಳು ಅವರ ಮನೆ ಬೆಳಗುವ ಜೊತೆಗೆ ದೇಶದ ಆಸ್ತಿಯಾಗಬೇಕು’ ಎಂದರು.

ADVERTISEMENT

‘ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಲ್ಯಾಪ್‌ಟಾಪ್‌ ವಿತರಿಸಲಾಗುತ್ತಿದೆ. ಕೋವಿಡ್ ಇರುವುದರಿಂದ ಸದ್ಯ 40 ಮಂದಿಗೆ ಮಾತ್ರ ಲ್ಯಾಪ್‍ಟಾಪ್ ವಿತರಿಸಲಾಗಿದೆ. ಉಳಿದವರ ವಿಳಾಸಗಳಿಗೆ ಈ ವಾರಾಂತ್ಯದಲ್ಲಿ ಲ್ಯಾಪ್‌ಟಾಪ್‌ ತಲುಪಿಸಲಾಗುವುದು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿಅಶೋಕ್ ಹಾರನಹಳ್ಳಿ ಅವರನ್ನು ಸನ್ಮಾನಿಸಲಾಯಿತು.ಬ್ರಿಗೇಡ್ ಹಾಸ್ಪಿಟಾಲಿಟಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವಿನೀತ್ ವರ್ಮ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.