
ಬೆಂಗಳೂರು: ಪೇಯಿಂಗ್ ಗೆಸ್ಟ್ (ಪಿ.ಜಿ) ಕಚೇರಿ ಹಾಗೂ ಮನೆಗಳಿಗೆ ನುಗ್ಗಿ ಲ್ಯಾಪ್‌ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಅಂಬೂರು ತಾಲ್ಲೂಕಿನ ಉದೈಯರಾಜಪಾಳ್ಯಂ ಗ್ರಾಮದ ಸಂತೋಷ್ (26) ಬಂಧಿತ. ಆರೋಪಿಯಿಂದ ₹10 ಲಕ್ಷ ಮೌಲ್ಯದ ವಿವಿಧ ಕಂಪನಿಯ 15 ಲ್ಯಾಪ್‌ಟಾಪ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಅಂಬೇಡ್ಕರ್ ನಗರದ ಶ್ರೀಸಾಯಿ ಪೇಯಿಂಗ್ ಗೆಸ್ಟ್‌ನಲ್ಲಿ ವಾಸವಿದ್ದ ಸಂಗಮೇಶ್ ಅವರ ಲ್ಯಾಪ್‌ಟಾಪ್ ಅನ್ನು ಆರೋಪಿ ಕಳ್ಳತನ ಮಾಡಿದ್ದ. ಸಂಗಮೇಶ್ ಅವರು ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಸುದ್ದಗುಂಟೆಪಾಳ್ಯ ಸಂಪಿಗೆಹಳ್ಳಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಸಂತೋಷ್ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ಜಾಮೀನಿನ ಮೇಲೆ ಹೊರಬಂದ ನಂತರವೂ ಕಳ್ಳತನ ಮುಂದುವರಿಸಿದ್ದರು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.