ADVERTISEMENT

ಕಪ್ಪು ಪಟ್ಟಿ ಧರಿಸಿ ಅಧ್ಯಾಪಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2018, 15:41 IST
Last Updated 3 ಆಗಸ್ಟ್ 2018, 15:41 IST

ಬೆಂಗಳೂರು: ಕೇಂದ್ರ ಸರ್ಕಾರದ ‘ಉನ್ನತ ಶಿಕ್ಷಣ ಕಾಯ್ದೆ–2018’ನ್ನು ವಿರೋಧಿಸಿ ವಿಶ್ವವಿದ್ಯಾಲಯ ಹಾಗೂ ಕಾಲೇಜು ಅಧ್ಯಾಪಕರು ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.

ರಾಜ್ಯದಾದ್ಯಂತ ಇರುವ ಸುಮಾರು ಹತ್ತು ಸಾವಿರ ಅಧ್ಯಾಪಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ತವ್ಯ ನಿರ್ವಹಿಸುತ್ತಲೇ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಏಳನೇ ವೇತನ ಆಯೋಗ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ಕನಿಷ್ಠ ಐದು ವರ್ಷಗಳ ಕಾಲ ಆರ್ಥಿಕ ಸಹಾಯವನ್ನು ನೀಡಬೇಕು. ಅರೆ ಕಾಲಿಕ, ತಾತ್ಕಲಿಕ, ಅತಿಥಿ, ಹಂಗಾಮಿ ಉಪನ್ಯಾಸಕರಿಗೆ ಏಕರೂಪ ವೇತನ ಹಾಗೂ ಸೇವಾ ನಿಯಮಗಳನ್ನು ಜಾರಿಗೊಳಿಸುವುದು.ಆರನೇ ವೇತನ ಆಯೋಗದ ನ್ಯೂನತೆಗಳನ್ನು ಸರಿಪಡಿಸುವುದು ಸೇರಿ ವಿವಿಧ ಪ್ರಮುಖ ಏಳು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ADVERTISEMENT

‘ಅಧ್ಯಾಪಕ ಸಂಘಟನೆಗಳ ಜೊತೆಗೆ ಚರ್ಚಿಸಿ, ಈ ಎಲ್ಲಾ ಬೇಡಿಕೆಗಳಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಮತ್ತು ಕಾಲೇಜು ಶಿಕ್ಷಕ ಸಂಘಗಳ ಒಕ್ಕೂಟವು ಪ್ರಧಾನಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಿಗೆ ಪತ್ರ ಬರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.