
ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್‌ನ ರಮತ್‌ಗನ್ ನಗರದ ಬಹುಮಹಡಿ ಕಟ್ಟಡವೊಂದು ಹಾನಿಗೆ ಒಳಗಾಗಿದೆ
ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸಿರುವ ವಿವಿಧ ಎಡಪಕ್ಷಗಳು, ಇದು ಅಮೆರಿಕದ ಸಾಮ್ರಾಜ್ಯಶಾಹಿ, ದುರಹಂಕಾರದ ಪರಾಕಾಷ್ಠೆ ಎಂದು ಟೀಕಿಸಿವೆ.
ದಾಳಿ ನಡೆಸಿ ಖಮೇನಿ ಅವರನ್ನು ಹತ್ಯೆ ಮಾಡಿರುವುದು, ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿರುವುದು, ಶಾಲೆಗಳ ಮೇಲೆ ಬಾಂಬ್‌ಗಳನ್ನು ಹಾಕಿ ಮಕ್ಕಳನ್ನು ಕೊಲ್ಲುತ್ತಿರುವುದು ಅಮಾನವೀಯ. ಇರಾನ್ ದೇಶದ ಸಾರ್ವಭೌಮತ್ವ, ವಿಶ್ವಸಂಸ್ಥೆಯ ನಿಯಮಗಳು ಮತ್ತು ಎಲ್ಲ ಅಂತರರಾಷ್ಟ್ರೀಯ ಒಪ್ಪಂದಗಳ ಘೋರ ಉಲ್ಲಂಘನೆಯಾಗಿದೆ ಎಂದು ಸಿಪಿಎಂ ಕಾರ್ಯದರ್ಶಿ ಪ್ರಕಾಶ್ ಕೆ., ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್, ಸಿಪಿಐ (ಎಂಎಲ್) ಕಾರ್ಯದರ್ಶಿ ಕ್ಲಿಫ್ಟನ್ ರೊಜಾರಿಯೋ, ಎಸ್‌ಯುಸಿಐ (ಸಿ) ಕಾರ್ಯದರ್ಶಿ ಉಮಾ ಕೆ., ಎಐಎಫ್‌ಬಿ ಕಾರ್ಯದರ್ಶಿ ಜಿ.ಆರ್. ಶಿವಶಂಕರ್ ಆಗ್ರಹಿಸಿದ್ದಾರೆ.
ಇರಾನ್ ಮೇಲಿನ ದಾಳಿಯ ನಿಜವಾದ ಗುರಿ ಅಲ್ಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿದೆ ಎಂದು ತಿಳಿಸಿದ್ದಾರೆ.
ಮಾನವ ಹತ್ಯಾಕಾಂಡ ನಡೆಸುತ್ತಿರುವ ಇಸ್ರೇಲ್‍ಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಭೇಟಿ ನೀಡಿ ಬೆಂಬಲ ಘೋಷಿಸಿದ್ದಾರೆ. ಈ ಪ್ರವಾಸ ಮುಗಿದ ಎರಡು ದಿನಗಳಲ್ಲೇ ಈ ದಾಳಿ ನಡೆದಿದೆ. ಇರಾನ್ ಮೇಲೆ ನಡೆದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಬೇಕು. ಇಸ್ರೇಲ್ ಮತ್ತು ಅಮೆರಿಕ ಕುರಿತು ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.