
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದ ಬನಶಂಕರಿ 6ನೇ ಹಂತದ 2ನೇ ಬಡಾವಣೆಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಯು ಶನಿವಾರ ಬೋನು ಇರಿಸಿದೆ.
‘ಅರಣ್ಯಾಧಿಕಾರಿಗಳು ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯುವವರೆಗೂ ಕಾಡಿನಂಚಿನ ರಸ್ತೆಯಲ್ಲಿ ವಾಯು ವಿಹಾರ ಮಾಡುವುದಾಗಲಿ ಅಥವಾ ಕತ್ತಲಾದ ಮೇಲೆ ಸಂಚರಿಸದಂತೆ ಸೂಚಿಸಲಾಗಿದೆ’ ಎಂದು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಸತೀಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.