ADVERTISEMENT

ಮಕ್ಕಳು ಸನ್ನಡತೆ ಬೆಳೆಸಿಕೊಳ್ಳಲಿ: ಲಕ್ಷ್ಮಿ ಹೆಬ್ಬಾಳಕರ ಸಲಹೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 16:33 IST
Last Updated 14 ಜುಲೈ 2024, 16:33 IST
ಲಕ್ಷ್ಮಿ ಹೆಬ್ಬಾಳಕರ
ಲಕ್ಷ್ಮಿ ಹೆಬ್ಬಾಳಕರ   

ಬೆಂಗಳೂರು: ‘ಚೆನ್ನಾಗಿ ಓದಿ ತಂದೆ–ತಾಯಿಗಳಿಗೆ ಒಳ್ಳೆಯ ಹೆಸರು ತರಬೇಕು. ಇನ್ನು ಮುಂದೆ ಯಾವುದೇ ಕೆಟ್ಟ ಕೆಲಸಗಳಲ್ಲಿ ಭಾಗವಹಿಸದೇ ಉತ್ತಮ ಪ್ರಜೆಗಳಾಗಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಲಕ್ಷ್ಮಿ ಹೆಬ್ಬಾಳಕರ ಅವರು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳಿಗೆ ಸಲಹೆ ನೀಡಿದರು.

ಮಡಿವಾಳದ ಸ್ತ್ರೀ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ವೀಕ್ಷಣಾಲಯದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಭೇಟಿಯಾಗಿ ಅವರು ಮಾತನಾಡಿದರು. ‘ಮಕ್ಕಳು ಜೀವನದಲ್ಲಿ ಸನ್ನಡತೆಯನ್ನು ಬೆಳೆಸಿಕೊಳ್ಳವ ಮೂಲಕ ಉತ್ತಮ ಪ್ರಜೆಗಳಾಗಬೇಕು’ ಎಂದು ಹೇಳಿದರು.

ಸ್ತ್ರೀ ಭವನದ ಆವರಣದಲ್ಲಿಯೇ ಇರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದ ಸಿಬ್ಬಂದಿಯೊಂದಿಗೆ ಸಹಾಯವಾಣಿ ಯಾವ ರೀತಿಯಾಗಿ ಕೆಲಸ ಮಾಡುತ್ತಿದೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಸಹಾಯವಾಣಿಯ ಕರೆಯೊಂದನ್ನು ಸ್ವೀಕರಿಸಿ, ಸಮಸ್ಯೆಯನ್ನು ಆಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.