ADVERTISEMENT

’ಅನ್ಯ ಭಾಷಿಕರು ಕನ್ನಡ ಕಲಿಯಲಿ, ಗೌರವಿಸಲಿ’: ಎಲ್‌.ಎನ್‌.ಮುಕುಂದರಾಜ್

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 14:10 IST
Last Updated 2 ಜೂನ್ 2025, 14:10 IST
ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು
ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು   

ರಾಜರಾಜೇಶ್ವರಿನಗರ: ‘ಕನ್ನಡ ಭಾಷೆ, ಸಂಸ್ಕೃತಿ, ನೆಲ–ಜಲದ ವಿಚಾರವಾಗಿ ಯಾರೇ ಲಘುವಾಗಿ ಮಾತನಾಡಿದರೂ ಸುಮ್ಮನಿರಲು ಸಾಧ್ಯವಿಲ್ಲ. ಅಂಥವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್‌.ಎನ್‌.ಮುಕುಂದರಾಜ್ ಅವರು ಎಚ್ಚರಿಸಿದರು.

ನಾಗರಬಾವಿಯ ಜ್ಞಾನಸೌಧದಲ್ಲಿ ಸಾಕ್ಷಾತ್ಕಾರ ಚಾರಿಟಬಲ್ ಸೊಸೈಟಿಯ 10ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ವಿಷಯದಲ್ಲಿ 95ಕ್ಕಿಂತಲೂ ಹೆಚ್ಚು ಅಂಕಗಳಿಸಿರುವ 15ಕ್ಕೂ ಹೆಚ್ಚು ಶಾಲೆಗಳ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ಅನ್ಯ ಭಾಷಿಕರು ಕನ್ನಡವನ್ನು ಕಲಿಯಬೇಕು. ಭಾಷೆಯನ್ನು ಪ್ರೀತಿಸಿ ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು. 

ADVERTISEMENT

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ‘ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿರುವ‌ ವಿದ್ಯಾರ್ಥಿಗಳು, ಮುಂದೆ ಉನ್ನತ ಶಿಕ್ಷಣ ಪಡೆದು  ಸಮಾಜಕ್ಕೆ ಸೇವೆ ಸಲ್ಲಿಸಬೇಕು. ತಂದೆ-ತಾಯಂದಿಯರಿಗೆ, ಪೋಷಕರಿಗೆ, ಶಿಕ್ಷಕ ವರ್ಗದವರಿಗೆ ಹೆಸರು ಮತ್ತು ಕೀರ್ತಿ ತರಬೇಕು’ ಎಂದು ಕಿವಿಮಾತು ಹೇಳಿದರು.

ಸಾಕ್ಷಾತ್ಕಾರ ಚಾರಿಟಬಲ್ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ, ಸೊಸೈಟಿ ಅಧ್ಯಕ್ಷೆ ವೀಣಾ ಗೋಪಾಲಕೃಷ್ಣ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ, ಪದಾಧಿಕಾರಿಗಳಾದ ಶಶಿಕುಮಾರ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.