ADVERTISEMENT

ರಾಜಧನ ಹಿಂಬಾಕಿ ಪಡೆಯಲು ಆಗ್ರಹಿಸಿ ಸಿಎಂಗೆ ಪತ್ರ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 0:13 IST
Last Updated 21 ಆಗಸ್ಟ್ 2024, 0:13 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ಜಾರ್ಖಂಡ್ ಮಾದರಿಯಲ್ಲಿ ಕೇಂದ್ರ ಸರ್ಕಾರದಿಂದ ಖನಿಜ ಸಮೃದ್ಧ ಜಮೀನುಗಳ ಮೇಲಿನ ರಾಜಧನದ ಹಿಂದಿನ ಬಾಕಿ ಪಡೆಯುವಂತೆ ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಜಧನದ ಹಿಂದಿನ ಬಾಕಿಯನ್ನು ವಸೂಲಿ ಮಾಡಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಅನುಮತಿ ನೀಡಿರುವುದು ಕರ್ನಾಟಕದ ಪಾಲಿಗೆ ವರದಾನವಾಗಿದೆ. ಇದರಿಂದ ರಾಜ್ಯಕ್ಕೆ ಭಾರಿ ಮೊತ್ತದ ಬಾಕಿ ರಾಜಧನ ಸಿಗಲಿದೆ. ಈ ಬಾಕಿ ಹಣವನ್ನು ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಕೋರ್ಟ್‌ ತೀರ್ಪಿನ ನಂತರ ಜಾರ್ಖಂಡ್‌ಗೆ ₹ 1.36 ಲಕ್ಷ ಕೋಟಿ ಬಾಕಿ ಬರಲಿದೆ. ಈ ಹಣದಲ್ಲಿ ಜಾರ್ಖಂಡ್ ಅಭಿವೃದ್ಧಿ ಹಾಗೂ ರಾಜ್ಯದ ಕಲ್ಯಾಣಕ್ಕೆ ವಿನಿಯೋಗಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ. ಇದೇ ಮಾದರಿಯಲ್ಲಿ ಕರ್ನಾಟಕದ ಪಾಲಿಗೆ ಬರಬೇಕಿರುವ ಮೊತ್ತವನ್ನು ಕೇಂದ್ರದಿಂದ ಪಡೆಯಬೇಕು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.