ADVERTISEMENT

ನಾಳೆ ಸಂಜೆಯಿಂದ ಕೆಲವೆಡೆ ಮದ್ಯ ನಿಷೇಧ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 21:45 IST
Last Updated 18 ಡಿಸೆಂಬರ್ 2020, 21:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಕಾರಣ ಭಾನುವಾರ (ಡಿ.20) ಸಂಜೆ 5 ಗಂಟೆಯಿಂದ ಮಂಗಳ
ವಾರ (ಡಿ.22) ಸಂಜೆ 5 ಗಂಟೆಯವರೆಗೆ ನಗರದ ಕೆಲವೆಡೆ ಮದ್ಯ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಒಟ್ಟು 80 ಗ್ರಾಮ ಪಂಚಾಯಿತಿಗಳು ಒಳಪಡಲಿವೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಡಿ.22 ರಂದು ನಡೆಯಲಿದೆ. ಯಲಹಂಕ ತಾಲ್ಲೂಕಿನ 15 ಗ್ರಾಮ ಪಂಚಾಯಿತಿಗಳು, ಉತ್ತರ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ಮತ್ತು ಶೇಖರಣೆಯನ್ನು ಮೂರು ದಿನ ನಿಷೇಧಿಸಲಾಗಿದೆ.

ಎರಡನೇ ಹಂತದ ಚುನಾವಣೆ ಡಿ.27ರಂದು ಪೂರ್ವ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳು, ದಕ್ಷಿಣ ತಾಲ್ಲೂಕಿನ 15 ಗ್ರಾಮ ಪಂಚಾಯಿತಿಗಳು, ಆನೇಕಲ್ ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಿಗೆ ನಡೆಯಲಿದೆ. ಈ ಪ್ರದೇಶಗಳಲ್ಲಿ ಡಿ.25ರ ಸಂಜೆ 5 ಗಂಟೆಯಿಂದ ಡಿ.27ರ ಸಂಜೆ 5 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಶೇಖರಣೆಯನ್ನು ನಿಷೇಧಿಸಿ, ಆದೇಶ ಹೊರಡಿಸಲಾಗಿದೆ.

ADVERTISEMENT

ಮತದಾನದ ದಿನ ರಜೆ
ಬೆಂಗಳೂರು:
ಗ್ರಾಮ ಪಂಚಾಯಿತಿಗಳಿಗೆ ಇದೇ 22 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮತ ಕ್ಷೇತ್ರ ವ್ಯಾಪ್ತಿ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಮತದಾನಕ್ಕೆ ಅನುಕೂಲವಾಗಲು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಮತಕ್ಷೇತ್ರಗಳಲ್ಲಿರುವ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಕೇಂದ್ರ ಮತ್ತು ರಾಜ್ಯ ಸ್ವಾಮ್ಯದ ಉದ್ದಿಮೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾಯಂ ಮತ್ತು ದಿನಗೂಲಿ ನೌಕರರಿಗೆ ರಾಜ್ಯ ಸರ್ಕಾರ ವೇತನ ಸಹಿತ ರಜೆ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.