ADVERTISEMENT

ಸಾಕ್ಷರತೆ: 20 ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮ

ಪ್ರಚಾರ ಪತ್ರ ಬಿಡುಗಡೆ; ನಂಜುಂಡಪ್ಪ ವರದಿಯಲ್ಲಿ ಗುರುತಿಸಲಾದ ಜಿಲ್ಲೆಗಳು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2018, 20:17 IST
Last Updated 26 ಡಿಸೆಂಬರ್ 2018, 20:17 IST
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್,ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಕೆ.ಎನ್.ವಿಜಯ, ಶಿಕ್ಷಣ ಇಲಾಖೆಯ ಆಯುಕ್ತ ಪಿ.ಸಿ. ಜಾಫರ್ ಇದ್ದರು
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್,ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಕೆ.ಎನ್.ವಿಜಯ, ಶಿಕ್ಷಣ ಇಲಾಖೆಯ ಆಯುಕ್ತ ಪಿ.ಸಿ. ಜಾಫರ್ ಇದ್ದರು   

ಬೆಂಗಳೂರು: ರಾಜ್ಯದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು 20 ಜಿಲ್ಲೆಗಳ 95 ತಾಲ್ಲೂಕುಗಳ ಹಿಂದುಳಿದ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಾ. ಡಿ.ಎಂ.ನಂಜುಂಡಪ್ಪ ವರದಿಯಲ್ಲಿ ಗುರುತಿಸಲಾದ ಜಿಲ್ಲೆಗಳನ್ನು ಈ ಕಾರ್ಯಕ್ರಮಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದರು. ಇತ್ತೀಚೆಗೆ ನಡೆದ ಸಭೆಯಲ್ಲಿಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ.ಜಾಫರ್‌,ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಕೆ.ಎನ್.ವಿಜಯ ಅವರು ಈ ಕಾರ್ಯಕ್ರಮದ ಪ್ರಚಾರ ಪತ್ರಗಳನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮ ಪರಿಕಲ್ಪನೆಯ ನಾಲ್ಕು ಮಾದರಿಯ ಭಿತ್ತಿಪತ್ರಗಳು, ಒಂದು ಸ್ಟಿಕ್ಕರ್‌ ಹಾಗೂ ಒಂದು ಮಾಹಿತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.

ADVERTISEMENT

ಎಲ್ಲೆಲ್ಲಿ ಕಾರ್ಯಕ್ರಮ?: ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ/ಚಿಕ್ಕೋಡಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು/ಮಧುಗಿರಿ, ವಿಜಯಪುರ, ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಗರ ಹಾಗೂ ಕೊಳೆಗೇರಿ ಪ್ರದೇಶಗಳ ಜನರಿಗೆ, ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೈದರಾಬಾದ್‌ ಕರ್ನಾಟಕ ಪ್ರದೇಶದ 6 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ 1,500 ಸದಸ್ಯರಿಗೆ 21 ದಿನಗಳ ಸಾಕ್ಷರತಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.