
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2025–26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಇದೇ 30ರಿಂದ ಫೆ.1ರವರೆಗೆ ಹಮ್ಮಿಕೊಂಡಿದೆ.
ಪರೀಕ್ಷೆಗಳು ರಾಜ್ಯದ 13 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗುತ್ತದೆ. ಇದೇ 22ರ ಒಳಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ವಿಚಾರಿಸಬಹುದು. ದೂರವಾಣಿ ಸಂಖ್ಯೆ 080 26612991 ಅಥವಾ 8618296186ಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು www.kasapa.in ಅಂತರ್ಜಾಲ ತಾಣದ ಮೂಲಕ ಸಹ ಪಡೆದುಕೊಳ್ಳಬಹುದು ಎಂದು ಪರಿಷತ್ತಿನ ವ್ಯವಸ್ಥಾಪಕ ಪಾರ್ಶ್ವನಾಥ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.