ADVERTISEMENT

ಕ್ರೆಡಾಯ್ ಜೊತೆ ಸಮನ್ವಯಕ್ಕೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2020, 15:07 IST
Last Updated 15 ಏಪ್ರಿಲ್ 2020, 15:07 IST
   

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ಭಾರತೀಯ ರಿಯಲ್ ಎಸ್ಟೇಟ್ ಡೆವಲಪರ್ರ್ಸ್‌ ಅಸೋಸಿಯೇಷನ್‌ಗಳ ಒಕ್ಕೂಟದ (ಕ್ರೆಡಾಯ್) ಜೊತೆಗೆ ಸಮನ್ವಯ ಸಾಧಿಸಲು ಪಾಲಿಕೆಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ನಗರದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಸ್ಥಿತಿ ದಾರುಣವಾಗಿದೆ. ಸಣ್ಣ ಸಣ್ಣ ಕೊಠಡಿಗಳಲ್ಲಿ ಕನಿಷ್ಠ 10 ರಿಂದ 15 ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ, ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಕ್ರೆಡಾಯ್‌ ಜೊತೆ ಸಮನ್ವಯ ಸಾಧಿಸುವಂತೆ ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ADVERTISEMENT

ಲಾಕ್‌ಡೌನ್ ಅವಧಿಯಲ್ಲಿ ಕಾರ್ಮಿಕರು ಆಹಾರ ಹಾಗೂ ವಸತಿ ಕಲ್ಪಿಸುವಂತೆ ನಿರ್ದೇಶಿಸಲು ಮೂಲ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.