ADVERTISEMENT

ಸಾಲ ಮನ್ನಾ: ಶೀಘ್ರವೇ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2018, 19:01 IST
Last Updated 14 ನವೆಂಬರ್ 2018, 19:01 IST

ಬೆಂಗಳೂರು: ಸಾಲ ಮನ್ನಾ ಯೋಜನೆಯಡಿ ರೈತರಿಗೆ ಸಹಾಯವಾಗಲು ಶೀಘ್ರವೇ ಸಹಾಯವಾಣಿ ಪ್ರಾರಂಭಿಸಲು ಸಾಲ ಮನ್ನಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಲ್ಲದೆ, ಸಾಲ ಮನ್ನಾ ಯೋಜನೆಯಡಿ ವಾಣಿಜ್ಯ ಬ್ಯಾಂಕ್‌ಗಳು ಸುಮಾರು 21 ಲಕ್ಷ ಸಾಲ ಖಾತೆಗಳ ಮಾಹಿತಿ ಒದಗಿಸಿರುವುದನ್ನು ಅಧಿಕಾರಿಗಳು ಮುಖ್ಯಮಂತ್ರಿ ಗಮನಕ್ಕೆ ತಂದರು.

ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ವಾಣಿಜ್ಯ ಬ್ಯಾಂಕುಗಳ ಸುಮಾರು 50 ಶಾಖೆಗಳಲ್ಲಿ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ.ಈ ಎರಡು ತಾಲ್ಲೂಕುಗಳ ಬ್ಯಾಂಕ್‍ಗಳ ಶಾಖೆಗಳಿಗೆ ರೈತರು ಭೇಟಿ ನೀಡಿ, ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಗಳ ಪ್ರತಿಯನ್ನು ಒದಗಿಸುತ್ತಿದ್ದಾರೆ.ಇದು ಯಶಸ್ವಿಯಾದರೆ ಇದೇ ತಿಂಗಳ ಕೊನೆಯಲ್ಲಿ ರಾಜ್ಯದ ಎಲ್ಲೆಡೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.