ADVERTISEMENT

‘6.88 ಲಕ್ಷ ರೈತರಿಗೆ ಸಾಲ’: ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 19:36 IST
Last Updated 7 ಜುಲೈ 2020, 19:36 IST
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌
ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌    

ಬೆಂಗಳೂರು: 2020–21 ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ ₹14,500 ಕೋಟಿ ಬೆಳೆ ಸಾಲ ವಿತರಿಸಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಈಗಾಗಲೇ ಏಪ್ರಿಲ್‌ 1 ರಿಂದ ಜುಲೈ 7 ರವರೆಗೆ 6,88,440 ರೈತರಿಗೆ, ₹4,685.10 ಕೋಟಿ ಬೆಳೆ ಸಾಲ ವಿತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 2019–20 ನೇ ಸಾಲಿನಲ್ಲಿ 22.58 ಲಕ್ಷ ರೈತರಿಗೆ ₹13,577 ಕೋಟಿ ಬೆಳೆ ಸಾಲ ವಿತರಣೆ ಮಾಡಲಾಗಿತ್ತು. ಈ ಬಾರಿ ಸಾಲ ನೀಡಿಕೆ ಪ್ರಮಾಣ ಹೆಚ್ಚಿಸಲಾಗಿದೆ ಎಂದಿದ್ದಾರೆ.

ADVERTISEMENT

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ: ರಾಜ್ಯದಲ್ಲಿ 42,608 ಆಶಾ ಕಾರ್ಯಕರ್ತೆಯರಿದ್ದು ಅವರಿಗೆ ತಲಾ ₹3,000 ಪ್ರೋತ್ಸಾಹ ಧನ ನೀಡುವ ಯೋಜನೆಯಡಿ ಈಗಾಗಲೇ 25,083 ಮಂದಿಗೆ ಹಣ ಪಾವತಿ ಮಾಡಲಾಗಿದೆ. ಯೋಜನೆ ಪ್ರಕಟಿಸಿದ ಕೆಲವೇ ದಿನಗಳಲ್ಲಿ ಶೇ 50 ರಷ್ಟು ಆಶಾ ಕಾರ್ಯಕರ್ತೆಯರಿಗೆ ಹಣ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಉಳಿದವರಿಗೂ ಆದಷ್ಟು ಬೇಗನೇ ಹಣ ಪಾವತಿ ಮಾಡಲಾಗುವುದು ಎಂದು ಸೋಮಶೇಖರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.