ADVERTISEMENT

ನಗರ ಸ್ಥಳೀಯ ಸಂಸ್ಥೆಗಳಿಗೆ ನಾಳೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2019, 19:46 IST
Last Updated 10 ನವೆಂಬರ್ 2019, 19:46 IST
   

ಬೆಂಗಳೂರು: ಮಂಗಳೂರು ಮತ್ತು ದಾವಣಗೆರೆ ಮಹಾನಗರ ಪಾಲಿಕೆಗಳ ಸಹಿತ ಹಲವು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಮಂಗಳವಾರ ಚುನಾವಣೆ ನಡೆಯಲಿದೆ.

ಕನಕಪುರ, ಕೋಲಾರ, ಮುಳಬಾಗಿಲು, ಕೆಜಿಎಫ್‌/ರಾಬರ್ಟ್ಸನ್‌ಪೇಟೆ, ಗೌರಿಬಿದನೂರು ಮತ್ತು ಚಿಂತಾಮಣಿ ನಗರಸಭೆಗಳು, ಮಾಗಡಿ, ಬೀರೂರು ಮತ್ತು ಕಂಪ್ಲಿ ಪುರಸಭೆಗಳು ಹಾಗೂ ಜೋಗ್‌–ಕಾರ್ಗಲ್‌, ಕುಂದಗೋಳ ಮತ್ತು ಕೂಡ್ಲಿಗಿ ಪಟ್ಟಣ ಪಂಚಾಯಿತಿಗಳಲ್ಲಿ ಮತದಾನ ನಡೆಯಲಿದೆ.

ಇದೇ 14ರಂದು ಫಲಿತಾಂಶ ಪ್ರಕಟವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.