ADVERTISEMENT

ಲಾಕ್‌ಡೌನ್ ನಿಯಮ ಉಲ್ಲಂಘನೆ | ಮೊದಲ ದಿನ 200 ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 20:32 IST
Last Updated 15 ಜುಲೈ 2020, 20:32 IST
ಸರ್ ತಗೋಳಿ ಮಾತಾಡಿ...... ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ 7 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಕಸ್ತೂರಿಬಾ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುವಾಗ ವ್ಯಕ್ತಿಯೊಬ್ಬರು ತಮ್ಮ ಫೋನ್ ನಲ್ಲಿ ಮಾತಾಡಿ ಎಂದಾಗ ಪೊಲೀಸ್ ಅಧಿಕಾರಿಯೊಬ್ಬರು ಕೋವಿಡ್‌ -19 (ಕೊರೊನಾ ಸೋಂಕು) ಭಯದಿಂದ ದೂರದಿಂದಲೇ ಸ್ಪೀಕರ್ ಆನ್ ಮಾಡಿಸಿ ಮಾತನಾಡಿದರು -ಪ್ರಜಾವಾಣಿ ಚಿತ್ರ/ ರಂಜು ಪಿ

ಬೆಂಗಳೂರು: ಲಾಕ್‌ಡೌನ್‌ನ ಮೊದಲ ದಿನವಾದ ಬುಧವಾರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ನಗರದ ವಿವಿಧ ಭಾಗಗಳಲ್ಲಿ 200 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್‌ ಕಮಿಷನರ್ ಭಾಸ್ಕರ ರಾವ್, ‘ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಕಾರು, ದ್ವಿಚಕ್ರ ವಾಹನಗಳು ಸೇರಿ 200 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೊದಲ ದಿನ ಆಗಿದ್ದರಿಂದ ಪೊಲೀಸರು ಒಂದಷ್ಟು ಮೃದುವಾಗಿ ವರ್ತಿಸಿದ್ದಾರೆ. ಮುಂದಿನ ಆರು ದಿನ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ’ ಎಂದರು.

ಈ ಮಧ್ಯೆ, ಕೋವಿಡ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಇರಬೇಕಾದ ಅಗತ್ಯದ ಬಗ್ಗೆ ಮಹಾಲಕ್ಷ್ಮಿ ಲೇಔಟ್‌ ಪೊಲೀಸರು ರಸ್ತೆಗಿಳಿದು ಜಾಗೃತಿ ಮೂಡಿಸಿದರು.

ADVERTISEMENT

ಈವರೆಗೆ 515 ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಶೇ 25ರಷ್ಟು ಪೊಲೀಸರು ಕ್ವಾರಂಟೈನ್‌ನಲ್ಲಿ ಇದ್ದಾರೆ. 50 ವರ್ಷ ದಾಟಿದ ಪೊಲೀಸ್‌ ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. 24 ಪೊಲೀಸ್‌ ಠಾಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.