ADVERTISEMENT

ಕೋಲಾರ ಲೋಕಸಭಾ |ಚಿಕ್ಕಪೆದ್ದಣ್ಣ, ಹನುಮಂತಯ್ಯಗೆ ಟಿಕೆಟ್‌ ನೀಡಿ: ಮಾದಿಗ ಸಂಘಟನೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 15:16 IST
Last Updated 28 ಮಾರ್ಚ್ 2024, 15:16 IST
<div class="paragraphs"><p>ಎಲ್‌. ಹನುಮಂತಯ್ಯ</p></div>

ಎಲ್‌. ಹನುಮಂತಯ್ಯ

   

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದಿಂದ ಚಿಕ್ಕಪೆದ್ದಣ್ಣ ಅಥವಾ ಎಲ್‌. ಹನುಮಂತಯ್ಯ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡುವ ಮೂಲಕ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಎ. ಕೇಶವಮೂರ್ತಿ, ‘ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಎಡಗೈ ಮಾದಿಗ ಸಮುದಾಯದವರಿಗೆ ಟಿಕೆಟ್‌ ನೀಡಬೇಕು. ಇದರಿಂದ, ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಮಾದಿಗ ಸಮುದಾಯದ ಮತಗಳನ್ನು ಪಡೆದುಕೊಳ್ಳಲು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.

ADVERTISEMENT

‘ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಚಿಂತಾಮಣಿ, ಶಿಡ್ಲಘಟ್ಟ, ಶ್ರೀನಿವಾಸಪುರ ತಾಲ್ಲೂಕಗಳಲ್ಲಿ ಮಾದಿಗ ಸಮುದಾಯವರು ಬಹುಸಂಖ್ಯಾತರಾಗಿದ್ದಾರೆ. ಬಂಗಾರಪೇಟೆ, ಮುಳಬಾಗಿಲು, ಕೋಲಾರ ತಾಲ್ಲೂಕುಗಳಲ್ಲಿ ಶೇ 50ರಷ್ಟು ಜನಸಂಖ್ಯೆಯನ್ನು ಹೊಂದಿದೆ. ಈ ಕ್ಷೇತ್ರದಲ್ಲಿ ಒಟ್ಟಾರೆ 3.50 ಲಕ್ಷಕ್ಕೂ ಅಧಿಕ ಮತದಾರರು ಇದ್ದಾರೆ’ ಎಂದು ಮಾಹಿತಿ ನೀಡಿದರು.

‘ಅಸ್ಪೃಶ್ಯರಲ್ಲಿ ಅಸ್ಪೃಶ್ಯರಾದ ಮಾದಿಗ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಮಾದಿಗ ಸಮುದಾಯಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್‌ ತಪ್ಪಿಸಲು ಯತ್ನಿಸುತ್ತಿರುವ ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಶಾಸಕ ಕೊತ್ತೂರು ಮಂಜುನಾಥ ಹೇಳಿಕೆಗಳು ಖಂಡನೀಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.