
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶನಿವಾರ ಮೂರು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಸಭಾ ಚುನಾವಣೆಯ ಸಂಬಂಧ ಮತ ಎಣಿಕೆ ಕೇಂದ್ರಗಳ ಬಳಿ ಇರಬೇಕಾಧ ಸಿದ್ದತೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಚಾಚು ತಪ್ಪದೆ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರಗಳು ಇರಬೇಕಾದ ರೀತಿ, ಬ್ಯಾರಿಕೇಡ್ ಅಳವಡಿಸುವ ವ್ಯವಸ್ಥೆ, ಆರ್.ಒ. ಕಚೇರಿ, ಮಾಧ್ಯಮ ಕೇಂದ್ರ ಸ್ಥಾಪನೆ, ಅಧಿಕಾರಿಗಳು ಹಾಗೂ ನಾಗರೀಕರು ಹೋಗುವ–ಬರುವ ವ್ಯವಸ್ಥೆ, ಮೂರು ಹಂತದ ಭದ್ರತೆ, ಸ್ಟ್ರಾಂಗ್ ರೂಂ, ಮತ ಎಣಿಕೆ ಕೊಠಡಿಗಳಲ್ಲಿ ಟೇಬಲ್ ಗಳ ಅಳವಡಿಕೆ, ಸಿಸಿ ಟಿವಿ ಅಳವಡಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳು ಸರಿಯಾದ ಕ್ರಮದಲ್ಲಿರಬೇಕು ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯು ಯಾವುದೇ ಗೊಂದಲಗಳಿಗೆ ಆಸ್ಪದ ಇರಬಾರದು. ತೊಂದರೆಗಳಿಲ್ಲದೆ ಸುಸೂತ್ರವಾಗಿ ನಡೆಯಲು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮೂರು ಮತ ಎಣಿಕೆ ಕೇಂದ್ರಗಳು:
ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಸೆಂಟ್ ಜೋಸೆಫ್ ಕಾಲೇಜು ಹಾಗೂ ಬೆಂಗಳೂರು ದಕ್ಷಿಣಕ್ಕೆ ಸಂಬಂಧಿಸಿದಂತೆ ಜಯನಗರ ಎಸ್.ಎಸ್.ಎಂ.ಆರ್.ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.
ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ. ಹರೀಶ್ ಕುಮಾರ್, ದಯಾನಂದ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.