ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಬೆಂಗಳೂರು: ದೂರುದಾರರ ಪರವಾಗಿ ಆದೇಶ ನೀಡಲು ₹25,000 ಲಂಚ ಪಡೆಯುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಅಧಿಕಾರಿ ಶ್ರೀರಾಮಾನುಜ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮಪುರ ನಿವಾಸಿ, ವಕೀಲ ಡಿ.ಎಚ್.ಗುರುಪ್ರಸಾದ್ ಅವರು ವಾಣಿಜ್ಯ ತೆರಿಗೆ ಇಲಾಖೆಯ ಶಾಂತಿನಗರ ಕಚೇರಿಯಲ್ಲಿ ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಆದೇಶ ನೀಡಲು ಶ್ರೀರಾಮಾನುಜ ಅವರು ₹75,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಗುರುಪ್ರಸಾದ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ರೂಪಿಸಿ, ಅದರಂತೆ ದೂರುದಾರರು ಆರೋಪಿಯ ಕಚೇರಿಗೆ ತೆರಳಿ ₹25,000 ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.