ADVERTISEMENT

ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ಕೋರಿದ ಅರ್ಜಿ: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:46 IST
Last Updated 24 ಜುಲೈ 2019, 19:46 IST

ಬೆಂಗಳೂರು: ‘ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು’ ಎಂಬ ಕೋರಿಕೆಯ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಆಗಸ್ಟ್‌ 13ಕ್ಕೆ ವಿಚಾರಣೆ ಮುಂದೂಡಿದೆ.

ADVERTISEMENT

ಎರಡು ಉಪಲೋಕಾಯುಕ್ತ ಹುದ್ದೆಗಳ ಪೈಕಿ ಸದ್ಯ ಒಂದು ಹುದ್ದೆ ಖಾಲಿ ಇದೆ. ಉಪ ಲೋಕಾಯುಕ್ತರಾಗಿದ್ದನ್ಯಾಯಮೂರ್ತಿ ಸುಭಾಷ್ ಬಿ. ಅಡಿ 2018ರ ಮಾರ್ಚ್‌ 1ರಂದು ನಿವೃತ್ತರಾಗಿದ್ದು ಅಂದಿನಿಂದ ಈ ಸ್ಥಾನ ಖಾಲಿ ಇದೆ.

2019ರ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಒಂದು ಉಪಲೋಕಾಯುಕ್ತ ಕಚೇರಿಯನ್ನು ಹುಬ್ಬಳ್ಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.