ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್
ಬೆಂಗಳೂರು: ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರೊಂದಿಗೆ ನಡೆಸಿರುವ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು, ಜಮೀರ್ ಅಹಮದ್ ಖಾನ್ ಅವರ ಆದಾಯದ ಮೂಲಗಳನ್ನು ಶೋಧಿಸಿದಾಗ ಸಾಲ ನೀಡಿದವರ ಪಟ್ಟಿಯಲ್ಲಿ ದಿನೇಶ್ ಅವರ ಹೆಸರು ಉಲ್ಲೇಖವಾಗಿದೆ. ಹಾಗಾಗಿ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ತನಿಖಾಧಿಕಾರಿ ಆಗಿರುವ ಲೋಕಾಯುಕ್ತ ಡಿವೈಎಸ್‌ಪಿ ಸತೀಶ್ ಕುಮಾರ್ ಅವರು ದಿನೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.
ನೋಟಿಸ್ ಜಾರಿ ಬೆನ್ನಲ್ಲೇ ದಿನೇಶ್ ಅವರು ದಾಖಲೆ ಕ್ರೋಡೀಕರಿಸಲು ಕಾಲಾವಕಾಶ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಈ ಹಿಂದೆ ನಟಿ ರಾಧಿಕಾ ಕುಮಾರಸ್ವಾಮಿ ಮತ್ತು ಉದ್ಯಮಿ ಕೆಜಿಎಫ್ ಬಾಬು ಅವರಿಗೆ ನೋಟಿಸ್ ಜಾರಿಗೊಳಿಸಿ ಹೇಳಿಕೆ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.