ADVERTISEMENT

ಲೋಕಾಯುಕ್ತ ಕಚೇರಿ ಭದ್ರತಾ ಸಿಬ್ಬಂದಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 3:00 IST
Last Updated 2 ಜುಲೈ 2020, 3:00 IST

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಪೊಲೀಸ್ ಮೀಸಲು ಪಡೆಯ (ಕೆಎಸ್ಆರ್‌ಪಿ) ಇಬ್ಬರು ಕಾನ್‌ಸ್ಟೆಬಲ್‌‌ಗಳಿಗೆ ಕೊರೊನಾ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ.

ಇಡೀ ಕಚೇರಿಯನ್ನು ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಭದ್ರತಾ ಸಿಬ್ಬಂದಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಗೊತ್ತಾಗಿಲ್ಲ. ಅವರ ಜೊತೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT