ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರಿಗೆ ಅಪರಿಚಿತರು ಕರೆ ಮಾಡಿ ಬೆದರಿಕೆ ಹಾಕಿದ್ದು, ಈ ಸಂಬಂಧ ಕೇಂದ್ರ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸೈಬರ್ ಅಪರಾಧ ಠಾಣೆ ಪೊಲೀಸರು ಹೇಳಿದರು.
‘ಜುಲೈ 9ರಂದು ಫಣೀಂದ್ರ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದ ಅಪರಿಚಿತರು, ಹಿರಿಯ ಕಾನೂನು ಸಲಹೆಗಾರ ದೀಪಕ್ ಕುಮಾರ್ ಶರ್ಮಾ ಹಾಗೂ ಕಿರಿಯ ಕಾನೂನು ಸಲಹೆಗಾರ ರಾಹುಲು ಕುಮಾರ್ ಶರ್ಮಾ ಎಂದು ಪರಿಚಯಿಸಿಕೊಂಡಿದ್ದರು. ಮುಂಬೈನಲ್ಲಿರುವ ಭಾರತೀಯ ದತ್ತಾಂಶ ಸಂರಕ್ಷಣಾ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬಳಸಿಕೊಂಡು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬುದಾಗಿ ಬೆದರಿಸಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.