ADVERTISEMENT

₹55 ಕೋಟಿ ಅವ್ಯವಹಾರ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 9:08 IST
Last Updated 18 ಏಪ್ರಿಲ್ 2023, 9:08 IST
ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ‌ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.
ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ‌ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.   

ಬೆಂಗಳೂರು: ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ಬಿಲ್ ಪಾವತಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ‌ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.

ಕಾಮಗಾರಿಯೊಂದಕ್ಕೆ ಮಂಜೂರಾಗಿದ್ದ ₹ 55 ಕೋಟಿಯನ್ನು ಸಂಸ್ಥೆಯ ಅಧ್ಯಕ್ಷ ಡಿ.ಎಸ್. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದರು. ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿರುವುದು ಕಂಡುಬಂದಿರುವ ಕಾರಣದಿಂದ ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ.

ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.