ಸಾವು–ಸಾಂದರ್ಭಿಕ ಚಿತ್ರ
ಬೆಂಗಳೂರು: ನೈಸ್ ರಸ್ತೆಯ ದೊಡ್ಡಬೆಲೆ ಟೋಲ್ ಗೇಟ್ ಸಮೀಪದಲ್ಲಿ ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಜಯರಾಮ್ (43) ಮೃತಪಟ್ಟಿದ್ದಾರೆ.
‘ಕುಂದಾಪುರದ ಜಯರಾಮ್, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬನ್ನೇರುಘಟ್ಟದಲ್ಲಿ ವಾಸವಿದ್ದರು. ಮೈಸೂರು ಮುಖ್ಯರಸ್ತೆ ಕಡೆಯಿಂದ ಹೊಸೂರು ರಸ್ತೆ ಕಡೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಕೆಂಗೇರಿ ಸಂಚಾರ ಠಾಣೆ ಪೊಲೀಸರು ಹೇಳಿದರು.
‘ಕಂಟೇನರ್ ಲಾರಿಯನ್ನು ಚಾಲಕ ನಿರ್ಲಕ್ಷ್ಯದಿಂದ ಅತೀ ವೇಗದಲ್ಲಿ ಚಲಾಯಿಸಿದ್ದ. ಇದರಿಂದಾಗಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದಿದ್ದ ಜಯರಾಮ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಪ್ರಜ್ಞೆ ತಪ್ಪಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ್ದ ವೈದ್ಯರು, ಜಯರಾಮ್ ಮೃತಪಟ್ಟಿರುವುದಾಗಿ ಹೇಳಿದರು.’
‘ಕಂಟೇನರ್ ಲಾರಿ (ಕೆಎ 51 7173) ಚಾಲಕನಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.