ADVERTISEMENT

ಧ್ವನಿವರ್ಧಕ ಬಳಸಲು ಅನುಮತಿ ಕಡ್ಡಾಯ: ಅನುಮತಿ ಪಡೆಯಲು ಗಡುವು

​ಪ್ರಜಾವಾಣಿ ವಾರ್ತೆ
Published 12 ಮೇ 2022, 22:15 IST
Last Updated 12 ಮೇ 2022, 22:15 IST
   

ಬೆಂಗಳೂರು: ‘ಮಸೀದಿ, ಚರ್ಚ್, ದೇವಸ್ಥಾನ ಹಾಗೂ ಇತರೆಡೆಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಕಡ್ಡಾಯ. 15 ದಿನದೊಳಗೆ, ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸದ್ಯ ಬಳಕೆ ಮಾಡುತ್ತಿರುವ ಧ್ವನಿವರ್ಧಕಗಳಿಗೂ ಹಾಗೂ ಹೊಸ ಧ್ವನಿವರ್ಧಕಗಳಿಗೂ ಅನುಮತಿ ಪಡೆಯಬೇಕು’ ಎಂದರು.

‘ಧ್ವನಿವರ್ಧಕ ಬಳಕೆ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಹಾಗೂ ಸುಪ್ರೀಂಕೋರ್ಟ್‌ ನಿರ್ದೇಶನಗಳನ್ನು ಎಲ್ಲರೂ ಪಾಲಿಸಬೇಕು. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸಲು ಅವಕಾಶವಿರುವುದಿಲ್ಲ. ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದರು.

ADVERTISEMENT

ಎಸಿಪಿ ಕಚೇರಿಗೆ ಅರ್ಜಿ ಸಲ್ಲಿಸಿ: ‘ಧ್ವನಿವರ್ಧಕ ಅರ್ಜಿಗಳ ಪರಿಶೀಲನೆ ಹಾಗೂ ಅನುಮತಿ ನೀಡುವ ಅಧಿಕಾರವನ್ನು ಸಹಾಯಕ ಪೊಲೀಸ್ ಕಮಿಷನರ್‌ಗಳಿಗೆ (ಎಸಿಪಿ) ನೀಡಲಾಗಿದೆ. ಮಸೀದಿ, ಚರ್ಚ್, ದೇವಸ್ಥಾನ ಹಾಗೂ ಇತರರು, ಎಸಿಪಿಗೆ ಅರ್ಜಿ ಸಲ್ಲಿಸಬೇಕು’ ಎಂದೂ ಕಮಲ್ ಪಂತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.