ADVERTISEMENT

ಕಿರುಕುಳ ಆರೋಪದಡಿ ಜೈಲು: ಹೊರಬಂದು ಯುವತಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 0:28 IST
Last Updated 28 ಜನವರಿ 2024, 0:28 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ‘ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ’ ಆರೋಪದಡಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿರುವ ಯುವಕನೊಬ್ಬ, ‘ಯುವತಿ ಹಾಗೂ ಇತರರು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಜರಾಜೇಶ್ವರಿನಗರ ಠಾಣೆಗೆ ದೂರು ನೀಡಿದ್ದಾರೆ.

‘ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವಕನ ವಿರುದ್ಧ 31 ವರ್ಷದ ಯುವತಿ ದೂರು ನೀಡಿದ್ದರು. ಅದರನ್ವಯ ಯುವಕನನ್ನು ಬಂಧಿಸಲಾಗಿತ್ತು. ಇದೀಗ ಅದೇ ಯುವಕ, ಯುವತಿ ಮೇಲೆಯೇ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ದೂರಿನ ವಿವರ: ‘ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಪರಿಚಯವಾಗಿದ್ದ ಯುವತಿ ಜೊತೆ ಸಲುಗೆ ಇಟ್ಟುಕೊಂಡಿದ್ದೆ. ಇಬ್ಬರೂ ಹಲವೆಡೆ ಸುತ್ತಾಡಿದ್ದೆವು. ₹ 20 ಲಕ್ಷ ನೀಡುವಂತೆ ಯುವತಿ ಬೇಡಿಕೆ ಇರಿಸಿದ್ದರು. ಹಣ ನೀಡದಿದ್ದರಿಂದ ನನ್ನ ವಿರುದ್ಧ ಕೋಣನಕುಂಟೆ ಠಾಣೆಯಲ್ಲಿ ಸುಳ್ಳು ದೂರು ನೀಡಿದ್ದರು’ ಎಂದು ಯುವಕ ದೂರಿನಲ್ಲಿ ತಿಳಿಸಿದ್ದಾರೆ.

‘ಜೈಲಿನಿಂದ ಬಿಡುಗಡೆಗೊಂಡ ಬಳಿಕವೂ ಯುವತಿ ಹಾಗೂ ಇತರರು, ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಜೀವ ಬೆದರಿಕೆಯೊಡ್ಡುತ್ತಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.