ADVERTISEMENT

LS Polls 2024: ಉದ್ಯಾನದಲ್ಲಿ ಮತಬೇಟೆ, ಅಪಾರ್ಟ್‌ಮೆಂಟ್‌ನಲ್ಲೂ ಪ್ರಚಾರ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 15:53 IST
Last Updated 27 ಮಾರ್ಚ್ 2024, 15:53 IST
ಬಸವನಗುಡಿಯ ಎಂ.ಎನ್. ಕೃಷ್ಣರಾವ್ ಉದ್ಯಾನದಲ್ಲಿ ವಾಯುವಿಹಾರಿಗಳ ಜೊತೆಗೆ ಚರ್ಚೆ ನಡೆಸಿದ ತೇಜಸ್ವಿ ಸೂರ್ಯ.
ಬಸವನಗುಡಿಯ ಎಂ.ಎನ್. ಕೃಷ್ಣರಾವ್ ಉದ್ಯಾನದಲ್ಲಿ ವಾಯುವಿಹಾರಿಗಳ ಜೊತೆಗೆ ಚರ್ಚೆ ನಡೆಸಿದ ತೇಜಸ್ವಿ ಸೂರ್ಯ.   

ಬೆಂಗಳೂರು: ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಕಾವೇರುತ್ತಿದ್ದು, ನಾಮಪತ್ರ ಸಲ್ಲಿಕೆಗೂ ಮೊದಲೇ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳು ಮತಬೇಟೆ ಆರಂಭಿಸಿದ್ದಾರೆ.

ತಮ್ಮ ಕ್ಷೇತ್ರ ವ್ಯಾಪ್ತಿಯ ಉದ್ಯಾನಗಳಲ್ಲಿ ಬೆಳಿಗ್ಗೆಯೇ ಭೇಟಿ ನೀಡುತ್ತಿರುವ ಅಭ್ಯರ್ಥಿಗಳು ಮತದಾರರ ಮನವೊಲಿಸುವ ಕಸರತ್ತು ನಡೆಸುತ್ತಿದ್ದಾರೆ. ಮತದಾರರ ಜೊತೆಗೆ ಹೆಜ್ಜೆ ಹಾಕಿ, ತಮ್ಮ ಅವಧಿಯಲ್ಲಿ ಮಾಡಿದ ಕೆಲಸಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅಪಾರ್ಟ್‌ಮೆಂಟ್‌ ನಿವಾಸಿಗಳನ್ನೂ ಸಂಜೆ ವೇಳೆಯಲ್ಲಿ ಭೇಟಿ ಮಾಡುತ್ತಿರುವ ಅಭ್ಯರ್ಥಿಗಳು, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ.

ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು, ಬುಧವಾರ ಬೆಳಿಗ್ಗೆ ಬಸವನಗುಡಿಯ ಎಂ.ಎನ್. ಕೃಷ್ಣರಾವ್ ಉದ್ಯಾನದಲ್ಲಿ ವಾಯುವಿಹಾರಿಗಳ ಜೊತೆಗೆ ಚರ್ಚೆ ನಡೆಸಿದರು.

ADVERTISEMENT

‘ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ಆಡಳಿತಾವಧಿಯಲ್ಲಿ ಆಗಿರುವ ಪರಿವರ್ತನಾತ್ಮಕ ಸಾಧನೆಗಳ ಬಗ್ಗೆ ನಿವಾಸಿಗಳ ಜೊತೆಗೆ ಚರ್ಚಿಸಿದ್ದೇನೆ’ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದಾದ್ಯಂತ ಸಂಚರಿಸುತ್ತಾ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳೂ ತಮ್ಮ ಕಾರ್ಯಕರ್ತರ ಜೊತೆಗೆ ಪ್ರಚಾರ ನಡೆಸುತ್ತಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.