ADVERTISEMENT

32 ಶಾಲೆ ದತ್ತು ಪಡೆದ ಚಿದಾನಂದ ಗೌಡ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 21:51 IST
Last Updated 7 ಏಪ್ರಿಲ್ 2021, 21:51 IST
ಚಿದಾನಂದ ಎಂ. ಗೌಡರ
ಚಿದಾನಂದ ಎಂ. ಗೌಡರ   

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ, ಬಿಜೆಪಿಯ ಚಿದಾನಂದ ಎಂ. ಗೌಡ ಅವರು 32 ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರ ಪ್ರತಿನಿಧಿಸುವ ಚಿದಾನಂದ ಗೌಡ, ತಮ್ಮ ಮತಕ್ಷೇತ್ರದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿರುವ 32 ತಾಲ್ಲೂಕುಗಳಿಂದ ಒಂದೊಂದು ಶಾಲೆಯನ್ನು ದತ್ತು ಪಡೆದಿದ್ದಾರೆ.

‘ಅವರ ಮಾದರಿಯನ್ನು ಇತರೆ ಜನಪ್ರತಿನಿಧಿಗಳೂ ಅನುಸರಿಸಬೇಕು’ ಎಂದು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ.ಆರ್. ದೊರೆಸ್ವಾಮಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.