ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 22:21 IST
Last Updated 25 ಆಗಸ್ಟ್ 2022, 22:21 IST

ಬೆಂಗಳೂರು: ‘ರಾಜ್ಯ ಬಿಜೆಪಿ ಸರ್ಕಾರ ಎ. ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ’ ಎಂದು ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿ ಆಗ್ರಹಿಸಿದೆ.

‘ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಕ್ಷೇತ್ರದ ಅಭಿವೃದ್ಧಿಗೆ ಸೀಮಿತವಾಗಿದ್ದಾರೆ. ಸಮುದಾಯದ ಅಭಿವೃದ್ಧಿಗೆ ಗಮನ ನೀಡುತ್ತಿಲ್ಲ. ಕೇಂದ್ರ ಸಚಿವರಾಗಿರುವ ಎ. ನಾರಾಯಣಸ್ವಾಮಿ ಅವರು ಸದಾಶಿವ ಆಯೋಗದ ವರದಿಗೆ ಧ್ವನಿ ಎತ್ತುತ್ತಿಲ್ಲ. ಆದ್ದರಿಂದ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಒತ್ತಾಯಿಸಿದರು.

‘ಅ. 2ರೊಳಗೆ ರಾಜ್ಯ ಸರ್ಕಾರ ನ್ಯಾ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ಮತ ನೀಡದಿರಲು ಕರೆ ನೀಡಬೇಕಾಗುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.