ಬೆಂಗಳೂರು: ಮಾದಿಗ ಮುಖಂಡರ ತುರ್ತು ಸಭೆಯನ್ನು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದ (ಗೇಟ್ ನಂ.4) ಸಭಾಂಗಣದಲ್ಲಿ ಸೆ.20ರಂದು ಮಧ್ಯಾಹ್ನ 2.30ಕ್ಕೆ ಕರೆಯಲಾಗಿದೆ.
ಮಾಜಿ ಸಚಿವ ಎಚ್. ಆಂಜನೇಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಮಾದಿಗ ಎಂದು ಕಡ್ಡಾಯವಾಗಿ ಬರೆಯಿಸುವುದು, ದೇವದಾಸಿಯರಲ್ಲಿ ಜಾಗೃತಿ ಮೂಡಿಸುವುದು, ಬಡ್ತಿಯಲ್ಲಿ ಒಳಮೀಸಲಾತಿ ಜಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ.
ಜೊತೆಗೆ ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಅಗಲಿರುವ ಹೋರಾಟಗಾರರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಹಾಲಿ-ಮಾಜಿ ಶಾಸಕರು, ಸಂಸದರು, ಜನಪ್ರತಿನಿಧಿಗಳು, ಚಿಂತಕರು, ನಿವೃತ್ತ ಅಧಿಕಾರಿಗಳು, ಸಾಹಿತಿಗಳು, ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮಾದಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಂಜನೇಯ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.