ADVERTISEMENT

ಮಹದಾಯಿ: ಕೇಂದ್ರದ ವಿರುದ್ಧ ಕನ್ನಡಿಗರೊಂದಿಗೆ ಹೋರಾಟ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 23:30 IST
Last Updated 23 ಜುಲೈ 2025, 23:30 IST
<div class="paragraphs"><p>ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಬಳಿ ಮಹದಾಯಿ ನದಿ &nbsp;(ಸಂಗ್ರಹ ಚಿತ್ರ)</p></div>

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಬಳಿ ಮಹದಾಯಿ ನದಿ  (ಸಂಗ್ರಹ ಚಿತ್ರ)

   

ಬೆಂಗಳೂರು: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ. ಇದರ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ
ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ಅಡಿ ನೀರನ್ನು ಕರ್ನಾಟಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರದ ಧೋರಣೆಯಿಂದಾಗಿ ಯೋಜನೆ ಜಾರಿ ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ADVERTISEMENT

ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ಅಡಿ ನೀರು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ಧಗೊಂಡಿದೆ. ಗೋವಾ ಬಿಜೆಪಿ ನೇತೃತ್ವದ ಸರ್ಕಾರದ ಜತೆ ಶಾಮೀಲಾಗಿ ಕೇಂದ್ರ ಸರ್ಕಾರ ನಿರಂತರ
ವಾಗಿ ಅಡ್ಡಗಾಲು ಹಾಕುತ್ತಿದೆ ಎಂದರು.

ರಾಜ್ಯದ ಬಿಜೆಪಿ ನಾಯಕರಾಗಲಿ, ಬಿಜೆಪಿ, ಜೆಡಿಎಸ್ ಸಂಸದರು ಅನ್ಯಾಯದ ವಿರುದ್ದ ದನಿ ಎತ್ತಲಾಗ
ದಷ್ಟು ನಿರ್ವಿರ್ಯರಾಗಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ತಿರಸ್ಕರಿಸಿದ ಕನ್ನಡಿಗರ ವಿರುದ್ಧ ಸೇಡು ತೀರಿಸಿಕೊಳ್ಳಲೆಂದೇ ಅನುಮತಿ ನಿರಾಕರಿಸಿರುವುದು ಸ್ಪಷ್ಟ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.