ADVERTISEMENT

ಮಹಾರಾಣಿ ಕಾಲೇಜು ವಿದ್ಯಾರ್ಥಿ ಸಂಘ: ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2018, 19:26 IST
Last Updated 16 ಜುಲೈ 2018, 19:26 IST
ಚುನಾವಣೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು –ಪ್ರಜಾವಾಣಿ ಚಿತ್ರ
ಚುನಾವಣೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಘದ ಚುನಾವಣೆ ಸೋಮವಾರ ನಡೆಯಿತು.

ಅಧ್ಯಕ್ಷೆಯಾಗಿ ನೇಹಾ ನಾಜ್‌, ಉಪಾಧ್ಯಕ್ಷೆಯಾಗಿ ಎನ್‌.ಪಲ್ಲವಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಚ್‌.ಹರ್ಷಿತ ಆಯ್ಕೆಯಾಗಿದ್ದಾರೆ.

‘ಇವಿಎಂ ಮೂಲಕ ಮತದಾನ ನಡೆಸಲಾಯಿತು. ಇಬ್ಬರು ಜಂಟಿ ಕಾರ್ಯದರ್ಶಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಕನ್ನಡ ವಿಭಾಗದ ಉಪನ್ಯಾಸಕ ಮಂಜುನಾಥ್‌ ಮಾಹಿತಿ ನೀಡಿದರು.

ADVERTISEMENT

‘ಈ ಚುನಾವಣೆಯಲ್ಲಿ ರಾಜಕೀಯಕ್ಕೆ ಅವಕಾಶ ಇರಲಿಲ್ಲ. ಎಬಿವಿಪಿ ಸೇರಿದಂತೆ ಯಾವುದೇ ಸಂಘಟನೆಗಳು ಭಾಗವಹಿಸಿಲ್ಲ. ಯುಜಿಸಿ ನಿಯಮಗಳ ಪ್ರಕಾರ ಸತತ ಎರಡನೇ ವರ್ಷ ಚುನಾವಣೆ ನಡೆದಿದೆ’ ಎಂದು ತಿಳಿಸಿದರು.

‘ಈ ಸಂಘ ಸಾಂಸ್ಕೃತಿಕ ಚಟುವಟಿಕೆ ನಡೆಸಲು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.