ADVERTISEMENT

ಗಾಂಧಿ ಹೆಸರಿಗೆ ಕೊಕ್‌: ಆಮ್ ಆದ್ಮಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 20:20 IST
Last Updated 19 ಡಿಸೆಂಬರ್ 2025, 20:20 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಪ್ರಜಾವಾಣಿ ಚಿತ್ರ
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಪ್ರಜಾವಾಣಿ ಚಿತ್ರ   

ಬೆಂಗಳೂರು: ನರೇಗಾ ಯೋಜನೆಗೆ ಪರ್ಯಾಯವಾಗಿ ರೂಪಿಸಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಮಸೂದೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಿರುವ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ‍್ರತಿಭಟನೆ ನಡೆಸಿದರು. 

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು. 

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ‘ದೇಶದ ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಇಷ್ಟು ವರ್ಷ ಗಾಂಧೀಜಿ ಹೆಸರಿನಲ್ಲೇ ಯೋಜನೆ ನಡೆಯುತ್ತಿತ್ತು. ಆದರೆ, ಏಕಾಏಕಿ ಕೇಂದ್ರದ ಬಿಜೆಪಿ ಸರ್ಕಾರ ನೂತನ ಮಸೂದೆಯ ಮೂಲಕ ರಾಷ್ಟ್ರಪಿತನ ಹೆಸರನ್ನೇ ತೆಗೆದುಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ ‘ಗ್ರಾಮೀಣ ಭಾಗದ ರೈತರಿಗೆ ಜೀವನೋಪಾಯಕ್ಕಾಗಿ 100 ದಿನ ಉದ್ಯೋಗ ನೀಡಿ ಎಲ್ಲ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಆದರೆ, ನೂತನ ಮಸೂದೆಯಲ್ಲಿ ರಾಜ್ಯ ಸರ್ಕಾರಗಳು ಸಹ ಪಾಲನ್ನು ನೀಡಬೇಕೆಂದು ಬೇಡಿಕೆ ಇಡುತ್ತಿರುವುದು ಕೇಂದ್ರದ ರೈತ ವಿರೋಧಿ ಹಾಗೂ ಪಲಾಯನವಾದದ ಸಂಕೇತ. ಕೇಂದ್ರ ಸರ್ಕಾರವು ನೂತನ ಮಸೂದೆಯ ಮೂಲಕ ಅನುದಾನಕ್ಕಾಗಿ ರಾಜ್ಯಗಳಿಗೆ ಆಶ್ರಯಿಸುತ್ತಿರುವುದು ಸಂವಿಧಾನ ವಿರೋಧಿಯಾಗಿದೆ’ ಎಂದು ಆರೋಪಿಸಿದರು. 

ಪ್ರತಿಭಟನೆಯಲ್ಲಿ ಪಕ್ಷದ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮೀಕಾಂತ್ ರಾವ್, ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ಉಷಾ ಮೋಹನ್, ಡಾ. ಸತೀಶ್ ಕುಮಾರ್, ಬಸವರಾಜ ಮುದಿಗೌಡರ್, ಶಶಿಧರ್ ಆರಾಧ್ಯ, ಸುಷ್ಮಾ ವೀರ್, ಜಗದೀಶ್ ಚಂದ್ರ, ರವಿಕುಮಾರ್, ಉಮೇಶ್ ಯಾದವ್ , ನವೀನ್ ಅಯ್ಯರ್, ಪುಟ್ಟಣ್ಣ ಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.