ಕೆಂಗೇರಿ: ರಾಮೋಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಹೇಶ್ ಆಯ್ಕೆಯಾದರು.
ಪ್ರಭು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. 33 ಸದಸ್ಯ ಬಲದ ಪಂಚಾಯಿತಿ ಅಧ್ಯಕ್ಷರ ಚುನಾವಣೆಗೆ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮಹೇಶ್ ಅವರು ಅವಿರೋಧವಾಗಿ ಆಯ್ಕೆಗೊಂಡರು. ಎಇಇ ವಿಜಯೇಂದ್ರ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಮುಖಂಡರಾದ ವೇಣುಗೋಪಾಲ್, ಚೇತನ್, ಮೋಹನ್, ನಾಗರಾಜ್, ದೇವರಾಜ್, ರವಿಕುಮಾರ್, ಮಂಜುನಾಥ್, ಸುಶೀಲಾ ನಾಗರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.