ADVERTISEMENT

ಮಾಕಳಿ: ಪಿಯು ಕಾಲೇಜು ಮಂಜೂರು

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 20:49 IST
Last Updated 7 ಜೂನ್ 2021, 20:49 IST

ಹೆಸರಘಟ್ಟ: ಮಾಕಳಿ ಗ್ರಾಮದಲ್ಲಿರುವ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಿಂದ ಈ ಕಾಲೇಜು ಕಾರ್ಯಾರಂಭ ಮಾಡಲಿದೆ.

‘ಮಾಕಳಿ ಗ್ರಾಮದ ಸುತ್ತ ಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಐದು ಪ್ರೌಢಶಾಲೆಗಳು ಕಾರ್ಯನಿರ್ವಹಿಸುತ್ತಿದ್ದವು. ಪದವಿ ಪೂರ್ವ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಏಳೆಂಟು ಕಿ.ಮೀ. ದೂರದಲ್ಲಿರುವ ಕಾಲೇಜುಗಳಿಗೆ ತೆರಳಬೇಕಾಗಿತ್ತು. ಮಾಕಳಿ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭವಾಗುವುದರಿಂದ ಈ ಭಾಗದ ಗ್ರಾಮಸ್ಥರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಆಲೂರು ಗ್ರಾಮದ ನಿವಾಸಿ ಅರುಣ್ ಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT