ADVERTISEMENT

ಮಲೆನಾಡು: ವಿಶೇಷ ಕೃಷಿ ವಲಯಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2023, 20:53 IST
Last Updated 1 ನವೆಂಬರ್ 2023, 20:53 IST
'ಮಲೆನಾಡು ಕರಾವಳಿ ಜನಪರ ಒಕ್ಕೂಟ' ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ (ಎಡದಿಂದ) ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ರೈತ ನಾಯಕ ಕೆ.ಟಿ ಗಂಗಾಧರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಹಿಳಾ ಹೋರಾಟಗಾರರಾದ ರಾಧಾ ಸುಂದ್ರೇಶ್, ಸತ್ಯಜಿತ್ ಸುರತ್ಕಲ್ ಭಾಗವಹಿಸಿದ್ದರು -ಪ್ರಜಾವಾಣಿ ಚಿತ್ರ
'ಮಲೆನಾಡು ಕರಾವಳಿ ಜನಪರ ಒಕ್ಕೂಟ' ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ (ಎಡದಿಂದ) ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ರೈತ ನಾಯಕ ಕೆ.ಟಿ ಗಂಗಾಧರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಹಿಳಾ ಹೋರಾಟಗಾರರಾದ ರಾಧಾ ಸುಂದ್ರೇಶ್, ಸತ್ಯಜಿತ್ ಸುರತ್ಕಲ್ ಭಾಗವಹಿಸಿದ್ದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಮಲೆನಾಡನ್ನು ವಿಶೇಷ ಕೃಷಿ ವಲಯ ಎಂದು ಘೋಷಿಸಬೇಕು ಎಂದು ಮಲೆನಾಡು–ಕರಾಗಳಿ ಜನಪರ ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ, ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರದ ಮಾರ್ಗೋಪಾಯಗಳನ್ನು ಪ್ರಸ್ತಾಪಿಸಲಾಯಿತು.

ಅರಣ್ಯ ಕಾಯ್ದೆ ಬಗ್ಗೆ ಪುನರ್ ಮನನ, ಮಲೆನಾಡು-ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಮಂಜೂರು ಮಾಡಬೇಕು ಎಂದು ಹಕ್ಕೊತ್ತಾಯ ಮಾಡಲಾಯಿತು.

ADVERTISEMENT

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ, ದೇವರಾಜು, ಲೋಹಿತ್ ನಾಯ್ಕರ್, ಜ್ಯೋತಿ ಪಾಟೀಲ್, ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಸುಧೀರ್‌ಕುಮಾರ್ ಮುರೊಳ್ಳಿ ಮಾತನಾಡಿದರು.

ಕಂದಾಯ, ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ತೊಡಕುಗಳನ್ನು ನಿವಾರಿಸಬೇಕು. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮೆಡಿಕಲ್, ಐಐಟಿ ಕಾಲೇಜು ಸ್ಥಾಪಿಸಬೇಕು. ಮೀನುಗಾರಿಕೆಗೆ ಆಧುನಿಕ ಸ್ಪರ್ಶ ನೀಡಬೇಕು. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಬೇಕು. ಗೋರಖ್‍ಸಿಂಗ್ ವರದಿ ಜಾರಿ ಮಾಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯ ಮಂಡಿಸಲಾಯಿತು.

ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ವಿನಯ್‍ಕುಮಾರ್ ಸೊರಕೆ, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್, ರೈತ ಮುಖಂಡ ಕೆ.ಟಿ.ಗಂಗಾಧರ್, ನಾರಾಯಣಗುರು ಹೋರಾಟ ಸಮಿತಿಯ ಸತ್ಯಜಿತ್ ಸೂರತ್ಕಲ್‌, ಹೋರಾಟಗಾರಾದ ರಾಧಾ ಸುಂದರೇಶ್, ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.