ADVERTISEMENT

ಕಸಾಪ ಗೌರವ ಕಾರ್ಯದರ್ಶಿಯಾಗಿ ಮಲ್ಲೇಶಗೌಡ ನೇಮಕ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 16:34 IST
Last Updated 26 ಜೂನ್ 2025, 16:34 IST
   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಗೌರವ ಕಾರ್ಯದರ್ಶಿ ಹುದ್ದೆಗೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಲ್. ಮಲ್ಲೇಶಗೌಡ ಅವರನ್ನು ನೇಮಕ ಮಾಡಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆದೇಶ ಹೊರಡಿಸಿದ್ದಾರೆ. 

ಈ ಹುದ್ದೆಯಲ್ಲಿದ್ದ ಪದ್ಮಿನಿ ನಾಗರಾಜು ಅವರ ರಾಜೀನಾಮೆ ಅಂಗೀಕೃತವಾಗಿದೆ. ಇದೇ 29ರಂದು ಕಸಾಪ ಕಾರ್ಯಕಾರಿ ಸಮಿತಿ ಸಭೆಯು ಬಳ್ಳಾರಿಯ ಸಂಡೂರಿನ ಕೂಡ್ಲಿಗಿ ರಸ್ತೆಯಲ್ಲಿರುವ ಆದರ್ಶ ಕಲ್ಯಾಣ ಮಂಟಪದಲ್ಲಿ ಆಯೋಜನೆಗೊಂಡಿರುವ ಕಾರಣ, ಗೌರವ ಕಾರ್ಯದರ್ಶಿ ಹುದ್ದೆಗೆ ಮಲ್ಲೇಶಗೌಡ ಅವರನ್ನು ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT