ADVERTISEMENT

ಮಲ್ಲೇಶ್ವರದಲ್ಲಿ ವಾಣಿಜ್ಯ ವಹಿವಾಟು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 21:08 IST
Last Updated 30 ಜೂನ್ 2020, 21:08 IST

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಎಲ್ಲ ರೀತಿಯ ವಾಣಿಜ್ಯ ವಹಿವಾಟನ್ನು ಜುಲೈ 1ರಿಂದ 6ರವರೆಗೆ ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಮಲ್ಲೇಶ್ವರ ಕಮರ್ಷಿಯಲ್ ಫೋರಂ ತಿಳಿಸಿದೆ.

ಗ್ರಾಹಕರು, ಮಳಿಗೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಮಾಲೀಕರ ಆರೋಗ್ಯ ದೃಷ್ಟಿಯಿಂದ ತಾತ್ಕಾಲಿಕವಾಗಿ ವ್ಯಾಪಾರ ನಿಲ್ಲಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT