ADVERTISEMENT

ಮಹಾರಾಷ್ಟ್ರ ಉಸ್ತುವಾರಿಯಿಂದ ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ: ಮಲ್ಲಿಕಾರ್ಜುನ ಖರ್ಗೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 9:59 IST
Last Updated 12 ಸೆಪ್ಟೆಂಬರ್ 2020, 9:59 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಬೆಂಗಳೂರು: ‘ಪಕ್ಷದ ಮಹಾರಾಷ್ಟ್ರ ಉಸ್ತುವಾರಿಯಿಂದ ನನ್ನನ್ನು ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ. ಎಲ್ಲವೂ ನಮ್ಮ‌ ಕೈಯಲ್ಲಿ‌ ಇರುವುದಿಲ್ಲ. ಎಲ್ಲವೂ ನನಗೆ ಸಿಗಬೇಕೆಂಬ ಆಸೆಯೂ ನನಗಿಲ್ಲ. ನಾನು ಒಂದು ತತ್ವಾದರ್ಶ ಹೊಂದಿದವನು’ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಾನು ನೆಹರು, ಅಂಬೇಡ್ಕರ್ ಅವರ ಸಾಮಾಜಿಕ‌ ನ್ಯಾಯಕ್ಕೆ ಬದ್ಧನಾಗಿರುವವನು’ ಎಂದರು.

‘ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ತರಲು ಯಾರೇ ಇರಲಿ. ಅದಕ್ಕೆ ನನ್ನ ಒಪ್ಪಿಗೆ ಇದೆ. ನನಗೆ ಹುದ್ದೆ ಸಿಗಲಿಲ್ಲ ಎಂದು ವ್ಯಥೆ ಪಟ್ಟವನೂ ಅಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಇರಬೇಕು. ಆ ದಿಕ್ಕಿನಲ್ಲೇ ನಾನು ಮುನ್ನಡೆದಿರುವವನು’ ಎಂದರು.

ADVERTISEMENT

‘ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿಲ್ಲ. ಆ ಸ್ಥಾನದಲ್ಲಿ ಈಗ ಗುಲಾಂ ನಬಿ ಇದ್ದಾರೆ. ಅದರ ಬಗ್ಗೆ ಹೈಕಮಾಂಡ್ ನಿಲುವು ತೆಗೆದುಕೊಳ್ಳಲಿದೆ. ಹೈಕಮಾಂಡ್ ನಿಲುವಿಗೆ ನಾನು‌ ತಲೆ ಬಾಗುತ್ತೇನೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.