ಬೆಂಗಳೂರು: ಲ್ಯಾಪ್‌ಟಾಪ್ ದುರಸ್ತಿ ವೇಳೆ ಖಾಸಗಿ ಫೋಟೊಗಳನ್ನು ಕದ್ದಿಟ್ಟುಕೊಂಡು ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ಪ್ರವೀಣ್ ರಾವ್ (40) ಎಂಬುವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
‘ದಾಸರಹಳ್ಳಿ ಮಹೇಶ್ವರಿ ನಗರದ ಪ್ರವೀಣ್ ರಾವ್, ಲ್ಯಾಪ್‌ಟಾಪ್ ದುರಸ್ತಿ ಮಳಿಗೆ ಇಟ್ಟುಕೊಂಡಿದ್ದ. ಮಹಿಳೆ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.