ADVERTISEMENT

ಡ್ರಗ್ಸ್ ಮಾರುತ್ತಿದ್ದ ‘ಬೇಕರಿ’ ಬಂಧನ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 21:01 IST
Last Updated 2 ಡಿಸೆಂಬರ್ 2022, 21:01 IST
   

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪಿ ರಿಜ್ವಾನ್ ಪಾಷಾ ಅಲಿಯಾಸ್ ಬೇಕರಿಯನ್ನು (21) ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

‘ಮೈಸೂರು ರಸ್ತೆಯ ವಾಲ್ಮೀಕಿ ನಗರದ ರಿಜ್ವಾನ್, ಹಲವು ತಿಂಗಳಿನಿಂದ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈತನನ್ನು ಬಂಧಿಸಿ ₹ 1 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಎ.ವಿ. ರಸ್ತೆಗೆ ಡಿ. 1ರಂದು ಬೆಳಿಗ್ಗೆ ಬಂದಿದ್ದ ಆರೋಪಿ ರಿಜ್ವಾನ್, ಪರಿಚಯಸ್ಥ ಗ್ರಾಹಕರಿಗೆ ಡ್ರಗ್ಸ್ ಮಾರುತ್ತಿದ್ದ. ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದ. ಈತನ ವಿರುದ್ಧ ಎಂಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.