ADVERTISEMENT

ಯುವತಿಗೆ ಲೈಂಗಿಕ ಕಿರುಕುಳ: ಕೇರಳದಲ್ಲಿ ಆರೋಪಿ ಬಂಧನ

ಯುವತಿಗೆ ಲೈಂಗಿಕ ಕಿರುಕುಳ: ಸ್ನೇಹಿತನ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಚಾಲಕ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2025, 23:24 IST
Last Updated 13 ಏಪ್ರಿಲ್ 2025, 23:24 IST
<div class="paragraphs"><p>ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ</p></div>

ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಭಾನುವಾರ ಕೇರಳದಲ್ಲಿ ಬಂಧಿಸಿ, ನಗರಕ್ಕೆ ಕರೆತರಲಾಗುತ್ತಿದೆ.

ಸ್ಮೇಹಿತನ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಡಿ.ಸಂತೋಷ್‌ ಎಂಬಾತನನ್ನು ಬಂಧಿಸಲಾಗಿದೆ. ಈತ  ತಿಲಕ್ ನಗರದ ಗುಲಬರ್ಗಾ ಕಾಲೊನಿ ನಿವಾಸಿಯಾಗಿದ್ದು, ಕಾರು ಚಾಲಕನಾಗಿದ್ದಾನೆ. ಮದ್ಯದ ಅಮಲಿನಲ್ಲಿ ಕೃತ್ಯವೆಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು. 

ADVERTISEMENT

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ ಒಂದನೇ ಕ್ರಾಸ್‌ನಲ್ಲಿ ಅಡ್ಡರಸ್ತೆಯಲ್ಲಿ ಏಪ್ರಿಲ್‌ 3ರಂದು ರಾತ್ರಿ ಘಟನೆ ನಡೆದಿತ್ತು. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಸ್ಥಳೀಯ ನಿವಾಸಿ ಲೋಕೇಶ್‌ಗೌಡ ಎಂಬುವರು ನೀಡಿದ ದೂರಿನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸುದ್ದಗುಂಟೆಪಾಳ್ಯ ಠಾಣೆಯ ಎರಡು ಪ್ರತ್ಯೇಕ ತಂಡಗಳು ತಮಿಳುನಾಡಿಗೆ ತೆರಳಿ, ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಸಿದವು. ಬಂಧನ ಭೀತಿಯಿಂದ ಆರೋಪಿ ಕೇರಳಕ್ಕೆ ಪರಾರಿಯಾಗಿದ್ದ. ಖಚಿತ ಮಾಹಿತಿಗೆ ಮೇರೆಗೆ ಕೋಯಿಕ್ಕೋಡ್‌ನಲ್ಲಿ ಸ್ನೇಹಿತನ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

‘ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಯ ಪತ್ತೆಗಾಗಿ 10 ಮಂದಿಯ ಎರಡು ವಿಶೇಷ ತಂಡ ರಚಿಸಲಾಗಿತ್ತು. ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ 1,600 ದೃಶ್ಯಗಳನ್ನು ಪರಿಶೀಲಿಸಲಾಗಿತ್ತು. ಆರೋಪಿ ಬೆಂಗಳೂರು ಬಿಟ್ಟು ಹೊಸೂರು ಮಾರ್ಗವಾಗಿ ತಮಿಳುನಾಡಿನ ಕಡೆ ಪರಾರಿ ಆಗಿರುವುದು ಗೊತ್ತಾಯಿತು. ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಆತ ಕೇರಳದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಆಧರಿಸಿ, ಅಲ್ಲಿಗೆ ತೆರಳಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.