
ಬೆಂಗಳೂರು: ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವಾಗ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮುತ್ತಪ್ಪ (55) ಎಂಬಾತ ಡಿ.23ರಂದು ಸಂಜೆ ವಿಧಾನಸೌಧ ನಿಲ್ದಾಣದಿಂದ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ನಿಲ್ದಾಣಕ್ಕೆ ಮೆಟ್ರೊ ರೈಲಿನಲ್ಲಿ ತೆರಳುತ್ತಿದ್ದ. ಪಕ್ಕದಲ್ಲಿದ್ದ ಹೊರ ರಾಜ್ಯದ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.
ರೈಲು ಮೆಜೆಸ್ಟಿಕ್ ತಲುಪಿದಾಗ ಯುವತಿಯು ಮುತ್ತಪ್ಪನ ಅಸಭ್ಯ ವರ್ತನೆ ಬಗ್ಗೆ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದರು. ನಂತರ ಮೆಟ್ರೊ ಸಿಬ್ಬಂದಿ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡು ಯುವತಿಯೊಂದಿಗೆ ಠಾಣೆಗೆ ಕರೆದುಕೊಂಡು ಹೋಗಿದ್ದರು. ‘ಯುವತಿ ಲಿಖಿತ ದೂರು ನೀಡಲು ಒಪ್ಪಲಿಲ್ಲ. ದುರ್ವತನೆ ತೋರಿದ ಆರೋಪದ ಅಡಿ ವ್ಯಕ್ತಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ವಿಜಯನಗರದಲ್ಲಿ ವಾಸ ಆಗಿರುವ ಮುತ್ತಪ್ಪ ಕಾಲ್‍ಸೆಂಟರ್‌ನಲ್ಲಿ ಮಾಡುತ್ತಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.