ADVERTISEMENT

ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 18:54 IST
Last Updated 22 ಜುಲೈ 2024, 18:54 IST
ಸಿದ್ದಾಚಾರಿ
ಸಿದ್ದಾಚಾರಿ   

ಹಲಗೂರು (ಮಂಡ್ಯ ಜಿಲ್ಲೆ): ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಶನಿವಾರ ಆತ್ಮಹತ್ಯೆಗೆ ಯತ್ನಿಸಿದ ಕನಕಪುರ ತಾಲ್ಲೂಕಿನ ಹುಣಸನಹಳ್ಳಿಯ ಸಿದ್ದಾಚಾರಿ (28) ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋದರು. ಪ್ರವಾಸಿಗರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮದ್ದೂರು ತಾಲ್ಲೂಕಿನ ಕೂಳಗೆರೆಯ ಅವರು ಮರಗೆಲಸ ಮಾಡುತ್ತಿದ್ದರು. ಪತ್ನಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ನಾಲ್ಕು ದಿನಗಳ ಬಳಿಕ ಮಗವೂ ಮೃತಪಟ್ಟಿತ್ತು. ಇಬ್ಬರ ಸಾವಿನಿಂದ ಜುಗುಪ್ಸೆಗೊಂಡು ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಸಂಬಂಧಿಕರು ಸೋಮವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಮಳವಳ್ಳಿ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.